ಭಾರತೀಯ ಕಾರು ಗ್ರಾಹಕರ ಆದ್ಯತೆಗಳು ಇತ್ತೀಚಿನ ಕೆಲವು ವರ್ಷಗಳಿಂದ ಬದಲಾಗಿವೆ. ಮೊದಲು ಮೈಲೇಜ್ ಮತ್ತು ಬೆಲೆಗೆ ಹೆಚ್ಚು ಗಮನ ನೀಡುತ್ತಿದ್ದರೆ, ಈಗ ಸುರಕ್ಷತೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ವಾಹನ ತಯಾರಕರು ತಮ್ಮ ಹೊಸ ಮಾದರಿಗಳಲ್ಲಿ, ವಿಶೇಷವಾಗಿ ಎಲೆಕ್ಟ್ರಿಕ್ ವಾಹನಗಳಲ್ಲಿ (EV) ಸುರಕ್ಷತೆಗೆ ಆದ್ಯತೆ ನೀಡುತ್ತಿದ್ದಾರೆ.
ನೀವು ಸುರಕ್ಷಿತ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಯೋಚಿಸುತ್ತಿದ್ದರೆ, ಭಾರತ್ NCAP ಕ್ರ್ಯಾಶ್ ಟೆಸ್ಟ್‌ಗಳಲ್ಲಿ ಐದು ಸ್ಟಾರ್ ರೇಟಿಂಗ್ ಪಡೆದ ಕೆಲವು ಕಾರುಗಳ ಬಗ್ಗೆ ತಿಳಿದುಕೊಳ್ಳಿ.