ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಟೀಂ ಇಂಡಿಯಾ, ಯುಎಸ್‌ಎ ಎದುರು ಗೆದ್ದು ಭರ್ಜರಿ ಶುಭಾರಂಭ ಮಾಡಿದೆ. ಇದೀಗ ಫೆಬ್ರವರಿ 12ರಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿದ್ದ ಅಭಿಷೇಕ್ ಶರ್ಮಾ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಎರಡನೇ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್‌ಗೆ ನಿರಾಸೆಯಾಗುವುದು ಬಹುತೇಕ ಖಚಿತ.

ಇನ್ನು ಟೀಂ ಮ್ಯಾನೇಜ್‌ಮೆಂಟ್ ನಮೀಬಿಯಾ ಎದುರಿನ ಪಂದ್ಯಕ್ಕೂ ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆಯಿದೆ. ಹೀಗಾಗಿ 25 ರನ್ ಗಳಿಸಿದ್ದ ತಿಲಕ್ ವರ್ಮಾ ಸ್ಥಾನ ಉಳಿಸಿಕೊಳ್ಳಲಿದ್ದಾರೆ. ಇದರ ಜತೆಗೆ ನಾಯಕ ಸೂರ್ಯಕುಮಾರ್ ಯಾದವ್, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕ್ರಮವಾಗಿ ಮೊದಲ 5 ಸ್ಥಾನಗಳಲ್ಲಿ ಬ್ಯಾಟಿಂಗ್ ಮಾಡಲಿಳಿಯಲಿದ್ದಾರೆ.

ಇನ್ನು ಕೆಳ ಮಧ್ಯಮ ಕ್ರಮಾಂಕದಲ್ಲಿ ಆಲ್ರೌಂಡರ್ ಹಾಗೂ ಮ್ಯಾಚ್ ಫಿನಿಶರ್ ಆಗಿ ಬಿಗ್ ಹಿಟ್ಟರ್ ಶಿವಂ ದುಬೆ ಹಾಗೂ ಉಪನಾಯಕ ಅಕ್ಷರ್ ಪಟೇಲ್ ತಮ್ಮ ಸ್ಥಾನ ಉಳಿಸಿಕೊಳ್ಳಲಿದ್ದಾರೆ. ಹೀಗಾಗಿ ಮೊದಲ ಏಳು ಕ್ರಮಾಂಕದಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆಯಿಲ್ಲ.

ಕಳೆದ ಪಂದ್ಯದಲ್ಲಿ ರಿಂಕು ಸಿಂಗ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲವಾಗಿದ್ದರು. ಹೀಗಾಗಿ ರಿಂಕುಗೆ ವಿಶ್ರಾಂತಿ ನೀಡಿ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಳ್ಳಲಿದ್ದಾರೆ. ಜ್ವರದ ಕಾರಣದಿಂದಾಗಿ ಬುಮ್ರಾ, ಯುಎಸ್‌ಎ ಎದುರಿನ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಇನ್ನು ಕಳೆದ ಪಂದ್ಯದಲ್ಲಿ ಬುಮ್ರಾ ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದ ಮೊಹಮ್ಮದ್ ಸಿರಾಜ್ ಮೂರು ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ನಮೀಬಿಯಾ ಎದುರಿನ ಪಂದ್ಯವು ಡೆಲ್ಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿದೆ. ಹೀಗಾಗಿ ಪಿಚ್ ಸ್ಪಿನ್ನರ್‌ಗಳಿಗೆ ನೆರವು ನೀಡುವ ಸಾಧ್ಯತೆಯಿದ್ದು, ಸ್ಪಿನ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆಯುವ ನಿರೀಕ್ಷೆಯಿದೆ.

ಎಡಗೈ ಮಾರಕ ವೇಗಿ ಅರ್ಶದೀಪ್ ಸಿಂಗ್ ಕಳೆದ ಪಂದ್ಯದಲ್ಲಿ 18 ರನ್ ನೀಡಿ ಎರಡು ವಿಕೆಟ್ ಕಬಳಿಸಿದ್ದರು. ಇನ್ನು ಮಿಸ್ಟ್ರಿ ಸ್ಪಿನ್ನರ್ ಖ್ಯಾತಿಯ ವರುಣ್ ಚಕ್ರವರ್ತಿ ಕೂಡಾ ಒಂದು ವಿಕೆಟ್ ಕಬಳಿಸಿದ್ದರು. ಹೀಗಾಗಿ ಈ ಇಬ್ಬರು ಸ್ಥಾನ ಉಳಿಸಿಕೊಳ್ಳುವುದು ಬಹುತೇಕ ಕನ್ಫರ್ಮ್.

Source link
ಟಿ20 ವಿಶ್ವಕಪ್: ನಮೀಬಿಯಾ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಮೇಜರ್ ಚೇಂಜ್? ಇಲ್ಲಿದೆ ಭಾರತ ಸಂಭಾವ್ಯ ತಂಡ!