India vs New Zealand ODI Streaming: ಭಾರತ-ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಇದೇ ಜನವರಿ 11ರಿಂದ ಆರಂಭವಾಗಲಿದೆ. ಬನ್ನಿ ನಾವಿಂದು ಎಲ್ಲಿ ಉಚಿತವಾಗಿ ಈ ಪಂದ್ಯವನ್ನು ವೀಕ್ಷಿಸಬಹುದು ಎನ್ನುವುದನ್ನು ತಿಳಿಯೋಣ.

ಭಾರತ-ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11ರಿಂದ ಆರಂಭವಾಗಲಿದೆ. ಭಾರತ ತಂಡವು ಈ ಟಸರಣಿಗೆ ಆತಿಥ್ಯ ವಹಿಸಿದ್ದು, ವರ್ಷದ ಮೊದಲ ಸರಣಿಯಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದೆ.

ಮೂರು ಪಂದ್ಯಗಳ ಏಕದಿನ ಸರಣಿಗೆ ಈಗಾಗಲೇ ಭಾರತ ತಂಡ ಘೋಷಣೆಯಾಗಿದ್ದು, ಶುಭ್ಮನ್ ಗಿಲ್ ನಾಯಕನಾಗಿ ಹಾಗೂ ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಕಮ್ಬ್ಯಾಕ್ ಮಾಡಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಎಲ್ಲಿ ಪ್ರಸಾರವಾಗಲಿದೆ ಎನ್ನುವುದರ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಸಸ್ಪೆನ್ಸ್ ಇದೆ. ನಾವು ಈ ಪಂದ್ಯಗಳು ಯಾವೆಲ್ಲಾ ಫ್ಲಾಟ್ಫಾರಂನಲ್ಲಿ ವೀಕ್ಷಿಸಬಹುದು? ಫ್ರೀ ಆಗಿ ಎಲ್ಲಿ ವೀಕ್ಷಿಸಬಹುದು ಎನ್ನುವುದನ್ನು ತಿಳಿಯೋಣ.

ನ್ಯೂಜಿಲೆಂಡ್ ತಂಡವು ಭಾರತ ಪ್ರವಾಸದಲ್ಲಿ ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಉಭಯ ತಂಡಗಳು ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಸ್ ಟಿವಿ ವಾಹಿನಿಯಲ್ಲಿ ಕನ್ನಡ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ವೀಕ್ಷಿಸಹುದು.ಇದಷ್ಟೇ ಅಲ್ಲದೇ ಆನ್ಲೈನ್ ಸ್ಟ್ರೀಮಿಂಗ್ ಹಾಟ್ಸ್ಟಾರ್ನಲ್ಲಿಯೂ ವೀಕ್ಷಿಸಬಹುದಾಗಿದೆ.

ಭಾರತ-ನ್ಯೂಜಿಲೆಂಡ್ ತಂಡಗಳ ನಡುವಿನ ಸೀಮಿತ ಓವರ್ಗಳ ಸರಣಿಯ ಪಂದ್ಯಗಳನ್ನು ಜಿಯೋ ಹಾಟ್ಸ್ಟಾರ್ನಲ್ಲಿ ರೀಚಾರ್ಜ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ. ಆದರೆ ಡಿಡಿ ಫ್ರೀ ಡಿಶ್ನಲ್ಲಿ ಡಿಡಿ ಸ್ಪೋರ್ಟ್ಸ್ನಲ್ಲಿ ಉಚಿತವಾಗಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

ಶುಭ್ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ದ್ ಕೃಷ್ಣ, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಅರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.

Source link
ಭಾರತ-ನ್ಯೂಜಿಲೆಂಡ್ ನಡುವಿನ ಮ್ಯಾಚ್ ಫ್ರೀ ಆಗಿ ಎಲ್ಲಿ ವೀಕ್ಷಿಸಬಹುದು? ಇಲ್ಲಿದೆ ಡೀಟೈಲ್ಸ್