T20 ವಿಶ್ವಕಪ್ 2026ರ ಫೈನಲ್ ಪಂದ್ಯ ಅಹಮದಾಬಾದ್ನಲ್ಲಿ ನಡೆಯಲಿದ್ದು, ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಹಿಂದಿನ ದಾಖಲೆಗಳು ಮತ್ತು ಆಟಗಾರರ ಫಾರ್ಮ್ ಗಮನಿಸಿದರೆ, ಟೀಂ ಇಂಡಿಯಾ ಹಾಟ್ ಫೇವರಿಟ್ ಆಗಿ ಕಾಣುತ್ತಿದೆ.

ಐಸಿಸಿ ಟಿ20 ವಿಶ್ವಕಪ್ 2026 ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಇಡೀ ಕ್ರಿಕೆಟ್ ಜಗತ್ತು ಕಾಯುತ್ತಿರುವ ಫೈನಲ್ ಪಂದ್ಯಕ್ಕೆ ಸಮಯ ಬಂದಿದೆ. ಭಾನುವಾರ ಅಹಮದಾಬಾದ್ನ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಿ ಇತಿಹಾಸ ಬರೆಯಲು ಸಜ್ಜಾಗಿದೆ. ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದು, ಅದೇ ಹುಮ್ಮಸ್ಸಿನಲ್ಲಿ ಕಿವೀಸ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಗುರಿ ಹೊಂದಿದೆ.

ಟಿ20 ವಿಶ್ವಕಪ್ ಇತಿಹಾಸದಲ್ಲಿ ನಾಕೌಟ್ (ಸೆಮಿಫೈನಲ್, ಫೈನಲ್) ಪಂದ್ಯಗಳಲ್ಲಿ ಭಾರತದ ದಾಖಲೆ ಅದ್ಭುತವಾಗಿದೆ. ಇಲ್ಲಿಯವರೆಗೆ ಆಡಿದ 8 ನಾಕೌಟ್ ಪಂದ್ಯಗಳಲ್ಲಿ ಭಾರತ 5 ಬಾರಿ ಗೆದ್ದಿದ್ದು, ಕೇವಲ 3ರಲ್ಲಿ ಸೋತಿದೆ. 2007ರ ಚೊಚ್ಚಲ ವಿಶ್ವಕಪ್ನಲ್ಲಿ ಸೆಮಿಫೈನಲ್ ಮತ್ತು ಫೈನಲ್ ಎರಡನ್ನೂ ಗೆದ್ದು ಚಾಂಪಿಯನ್ ಆಗಿತ್ತು. 2014ರಲ್ಲಿ ಸೆಮಿಫೈನಲ್ ಗೆದ್ದರೂ, ಫೈನಲ್ನಲ್ಲಿ ಶ್ರೀಲಂಕಾ ವಿರುದ್ಧ ಸೋತು ರನ್ನರ್-ಅಪ್ ಆಯಿತು. 2016 ಮತ್ತು 2022ರ ಸೆಮಿಫೈನಲ್ಗಳಲ್ಲಿ ಸೋಲು ಕಂಡರೂ, 2024ರಲ್ಲಿ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಎರಡನೇ ಬಾರಿಗೆ ಕಪ್ ಗೆದ್ದುಕೊಂಡಿತು. ಈಗ 2026ರಲ್ಲೂ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಅದೇ ಆತ್ಮವಿಶ್ವಾಸದೊಂದಿಗೆ ಫೈನಲ್ಗೆ ಕಾಲಿಟ್ಟಿದೆ.

ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಇದುವರೆಗೂ ಗೆಲುವು ಸಿಕ್ಕಿಲ್ಲ ಅನ್ನೋದು ಗಮನಾರ್ಹ. ಈ ಟೂರ್ನಿಯಲ್ಲಿ ಎರಡೂ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದು, ಮೂರೂ ಬಾರಿಯೂ ಕಿವೀಸ್ ತಂಡವೇ ಗೆದ್ದಿದೆ. ಆದರೆ, ಒಟ್ಟಾರೆ ಟಿ20 ಅಂತರಾಷ್ಟ್ರೀಯ ಪಂದ್ಯಗಳ ದಾಖಲೆ ನೋಡಿದರೆ ಭಾರತದ್ದೇ ಮೇಲುಗೈ. ಇದುವರೆಗೆ ನಡೆದ 30 ಟಿ20 ಪಂದ್ಯಗಳಲ್ಲಿ ಭಾರತ 18 ಬಾರಿ ಗೆದ್ದರೆ, ನ್ಯೂಜಿಲೆಂಡ್ 11 ಬಾರಿ ಗೆದ್ದಿದೆ, ಒಂದು ಪಂದ್ಯ ಟೈ ಆಗಿದೆ. ಎಲ್ಲಾ ಮಾದರಿಗಳನ್ನು ಸೇರಿ ಐಸಿಸಿ ಟೂರ್ನಿಗಳಲ್ಲಿ ಕಿವೀಸ್ ಎದುರು ಅತಿ ಹೆಚ್ಚು ಗೆಲುವು ಸಾಧಿಸಿದ ತಂಡಗಳ ಪೈಕಿ ಭಾರತ (121 ಗೆಲುವು) ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ (122 ಗೆಲುವು) ಮೊದಲ ಸ್ಥಾನದಲ್ಲಿದೆ. ಈ ಪಂದ್ಯ ಗೆದ್ದರೆ ಆಸ್ಟ್ರೇಲಿಯಾದ ದಾಖಲೆಯನ್ನು ಸರಿಗಟ್ಟುವ ಅವಕಾಶ ಭಾರತಕ್ಕಿದೆ.

ಈ ಟೂರ್ನಿಯಲ್ಲಿ ಭಾರತದ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ 87 ರನ್ ಮತ್ತು ಅದಕ್ಕೂ ಮೊದಲು ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಿವೀಸ್ ಬೌಲರ್ಗಳನ್ನು ಎದುರಿಸಲು ಸ್ಯಾಮ್ಸನ್ ಪ್ರಮುಖ ಅಸ್ತ್ರವಾಗಲಿದ್ದಾರೆ.

ಇನ್ನೊಂದೆಡೆ, ನ್ಯೂಜಿಲೆಂಡ್ನ ಆರಂಭಿಕ ಆಟಗಾರ ಫಿನ್ ಅಲೆನ್ ಕೂಡ ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿ ಭೀಕರ ಫಾರ್ಮ್ನಲ್ಲಿದ್ದಾರೆ. ಅಹಮದಾಬಾದ್ ಪಿಚ್ ಬ್ಯಾಟಿಂಗ್ಗೆ ಸಹಕಾರಿಯಾಗಿರುವುದರಿಂದ, ದೊಡ್ಡ ಮೊತ್ತದ ನಿರೀಕ್ಷೆಯಿದೆ. ಇಲ್ಲಿ ನಡೆದ ಹಿಂದಿನ 6 ವಿಶ್ವಕಪ್ ಪಂದ್ಯಗಳಲ್ಲಿ 4 ಬಾರಿ 185ಕ್ಕೂ ಹೆಚ್ಚು ರನ್ ದಾಖಲಾಗಿದೆ. ಲಕ್ಷಕ್ಕೂ ಅಧಿಕ ಪ್ರೇಕ್ಷಕರ ಬೆಂಬಲ ಭಾರತಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.

ಭಾರತ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ನ್ಯೂಜಿಲೆಂಡ್: ಟಿಮ್ ಸೀಫರ್ಟ್ (ಕೀಪರ್), ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೋಲ್ ಮೆಕ್ಕಾಂಚಿ, ಮ್ಯಾಟ್ ಹೆನ್ರಿ, ಇಶ್ ಸೋಧಿ, ಲಾಕಿ ಫರ್ಗ್ಯೂಸನ್.

ಸದ್ಯಕ್ಕೆ ಫೈನಲ್ ಪ್ರವೇಶಿಸಿರುವ ಎರಡೂ ತಂಡಗಳು ಸಾಕಷ್ಟು ಸಮತೋಲಿತವಾಗಿ ಗುರುತಿಸಿಕೊಂಡಿದ್ದರು, ತವರಿನ ಅಭಿಮಾನಿಗಳ ಅಪಾರ ಬೆಂಬಲ ಹೊಂದಿರುವ ಭಾರತ ಈ ಬಾರಿ ಕಪ್ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ

Source link
T20 World Cup 2026: ಕಿವೀಸ್ ವಿರುದ್ಧ ಟೀಂ ಇಂಡಿಯಾಗೆ ಗೆಲ್ಲೋ ಚಾನ್ಸ್ ಎಷ್ಟಿದೆ? ಟ್ರ್ಯಾಕ್ ರೆಕಾರ್ಡ್ ಹೇಗಿದೆ?