ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ನಿರ್ಣಾಯಕ ಘಟ್ಟದಲ್ಲಿದ್ದು, ಇದೀಗ ಸೆಮಿಫೈನಲ್ ಪಂದ್ಯಗಳಿಗೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಫೈನಲ್ ಪ್ರವೇಶಿಸುವುದು ಯಾರು ಎನ್ನುವ ಬಗ್ಗೆ ಇಬ್ಬರು ದಿಗ್ಗಜ ಕ್ರಿಕೆಟಿಗರು ಭವಿಷ್ಯ ನುಡಿದಿದ್ದಾರೆ.

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಪಾಲ್ಗೊಂಡಿದ್ದವು. ಇದೀಗ ಸೂಪರ್-8 ಹಂತದ ಪಂದ್ಯಗಳು ಮುಕ್ತಾಯದ ಬಳಿಕ ನಾಲ್ಕು ತಂಡಗಳು ಸೆಮಿಫೈನಲ್ಗೆ ಲಗ್ಗೆಯಿಟ್ಟಿವೆ.

ಮಾರ್ಚ್ 04ರಂದು ನಡೆಯಲಿರುವ ಮೊದಲ ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಾದಾಡಲಿವೆ. ಇನ್ನು ಮಾರ್ಚ್ 05ರಂದು ನಡೆಯಲಿರುವ ಎರಡನೇ ಸಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ಹಾಗೂ ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡಗಳು ಮುಂಬೈನ ವಾಂಖೇಡೆ ಮೈದಾನದಲ್ಲಿ ಕಾದಾಡಲಿವೆ.

ಎರಡು ಸೆಮಿಫೈನಲ್ನಲ್ಲಿ ಗೆಲುವು ಸಾಧಿಸುವ ತಂಡಗಳು ಮಾರ್ಚ್ 08ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ನಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ.

ಇದೆಲ್ಲದರ ನಡುವೆ ಹಲವು ದಿಗ್ಗಜ ಕ್ರಿಕೆಟಿಗರು ಈ ಬಾರಿ ಫೈನಲ್ ಪ್ರವೇಶಿಸಬಲ್ಲ ಎರಡು ನೆಚ್ಚಿನ ತಂಡಗಳು ಯಾವುವು ಎನ್ನುವುದರ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಪಾಕಿಸ್ತಾನದ ದಿಗ್ಗಜ ಕ್ರಿಕೆಟಿಗ ಮೊಹಮ್ಮದ್ ಯೂಸುಪ್ ಹಾಗೂ ಆಸ್ಟ್ರೇಲಿಯಾದ ಲೆಜೆಂಡ್ ಮೆಗ್ರಾಥ್ ಕೂಡಾ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಈ ಬಾರಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಮ್ಮೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ ಎಂದು ಯೂಸುಪ್ ಹಾಗೂ ಮೆಗ್ರಾಥ್ ಭವಿಷ್ಯ ನುಡಿದಿದ್ದಾರೆ.

2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ನಲ್ಲೂ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಆಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಬಾರಿಯ ವಿಶ್ವಕಪ್ನಲ್ಲಿ ಯಾವ ತಂಡ ಚಾಂಪಿಯನ್ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Source link
ಟಿ20 ವಿಶ್ವಕಪ್ನಲ್ಲಿ ಈ 2 ತಂಡಗಳೇ ಫೈನಲ್ನಲ್ಲಿ ಪ್ರಶಸ್ತಿಗಾಗಿ ಹೋರಾಡಲಿವೆ! ಅಚ್ಚರಿ ಭವಿಷ್ಯ ನುಡಿದ ಪಾಕ್ ದಿಗ್ಗಜ ಕ್ರಿಕೆಟಿಗ