ಇಂಡಿಗೋ ರಾದ್ಧಾಂತ: ಬೆಂಗಳೂರು ಏರ್​​ಪೋರ್ಟ್​​ಗೆ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳ ಭೇಟಿ

ಇಂಡಿಗೋ ರಾದ್ಧಾಂತ: ಬೆಂಗಳೂರು ಏರ್​​ಪೋರ್ಟ್​​ಗೆ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳ ಭೇಟಿ


ದೇವನಹಳ್ಳಿ, ಡಿಸೆಂಬರ್ 09: ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ ಇಂಡಿಗೋ ವಿಮಾನಗಳಲ್ಲಿ ಬಹಳ ವ್ಯತ್ಯಾಸವಾಗುತ್ತಿದೆ. ಸರಿ ಸುಮಾರು ಒಂದು ವಾರದ ಕಾಲ ವಿಮಾನಗಳು ಸಂಚಾರದಲ್ಲಿ ತೊಡಕಿನಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿವಿಧ ನಗರಗಳಿಗೆ ತೆರಳಲು ಮುಂಚಿತವಾಗಿಯೇ ಟಿಕೆಟ್ ಕಾಯ್ದಿರಿಸಿದ್ದರೂ ವಿಮಾನಗಳು ಹಾರಾಟ ನಡೆಸದ ಕಾರಣ ಅಥವಾ ವಿಳಂಬವಾದ ಕಾರಣ ಬಹಳ ಆಕ್ರೋಶ ವ್ಯಕ್ತಪಡಿಸುತ್ತಿದೆ. ಆಲ್ಲೇ ಬೆಂಗಳೂರು ಏರ್‌ಪೋರ್ಟ್‌ಗೆ ನಾಗರಿಕ ವಿಮಾನಯಾನ ಬೆನ್ನಿನ ಸಚಿವಾಲಯದ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ವಿಮಾನಯಾನ ಸಚಿವಾಲಯದ ನಿರ್ದೇಶಕ ಸಂಕೇಶ್ ಮೆಹ್ತಾ ನೇತೃತ್ವದ ಅಧಿಕಾರಿಗಳ ತಂಡ ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಬಳಿಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದು, ಕೈಗೊಂಡ ಕ್ರಮಗಳ ಜೊತೆಗೆ ಸಮಸ್ಯೆಗಳ ಪರಿಶೀಲನೆ ನಡೆಸಲಾಗಿದೆ. ಈ ಬಗ್ಗೆ ಟರ್ಮಿನಲ್ 1ರಲ್ಲಿ ಆಡಳಿತ ಮಂಡಳಿ ಅಧಿಕಾರಿಗಳಿಂದ ಮಾಹಿತಿ ಇದೆ. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಸಂಕೇಶ್ ಮೆಹ್ತಾ, ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಲಗೇಜ್ ಸೇರಿದಂತೆ ಎಲ್ಲಾ ಸಮಸ್ಯೆಗಳು ಹಂತ ಹಂತವಾಗಿ ಸರಿ ಹೋಗುತ್ತಿವೆ. ವಿಮಾನಯಾನ ಸಚಿವಾಲಯದಿಂದ ವಿಮಾನಗಳಿಗೆ ಸೂಚನೆ ನೀಡಲಾಗುವುದು, ವಿಮಾನಯಾನ ಸಚಿವರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣ ದೇಶದಲ್ಲೇ ಅತಿ ಹೆಚ್ಚು ಪ್ರಯಾಣಿಕರು ಬರುವ ಸ್ಥಳ. ಹೀಗಾಗಿ ಏರ್‌ಪೋರ್ಟ್‌ಗೆ ಭೇಟಿ ನೀಡಿ, ಕೆಐಎಬಿ ಹಾಗೂ ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳು ಜೊತೆ ಚರ್ಚೆ ನಡೆಸಿದರು.

ಇದನ್ನೂ ಓದಿ: ಮುಂದುವರಿದ ವಿಮಾನಗಳ ಹಾರಾಟ ವ್ಯತ್ಯಯ; KIAB ಯಿಂದ 61 ಇಂಡಿಗೋ ವಿಮಾನಗಳು ರದ್ದು

ಇಂದು ಕೂಡ ವಿಮಾನಗಳ ಹಾರಾಟ ರದ್ದು

ಸತತ 8ನೇ ದಿನವೂ ಬೆಂಗಳೂರು ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 121 ಇಂಡಿಗೋ ವಿಮಾನಗಳು ರದ್ದಾಗಿವೆ. ನಿರ್ಗಮಿಸಬೇಕಿದ್ದ 63, ಆಗಮಿಸಬೇಕಿದ್ದ 58 ವಿಮಾನಗಳು ಹಾರಾಟ ನಡೆಸಿಲ್ಲ. ರದ್ದಾದ ಪ್ರಯಾಣಿಕರ ಕುರಿತು ಮೊದಲೇ ಮಾಹಿತಿ ನೀಡಲಿರುವ ವಿಮಾನಗಳಿವೆ, ವಿಮಾನ ನಿಲ್ದಾಣಕ್ಕೆ ಬಾರದಂತೆ ವಿಮಾನಯಾನ ಸಿಬ್ಬಂದಿ ಸಂದೇಶ ರವಾನಿಸಿದ್ದಾರೆ. ಈ ನಡುವೆಯೂ ವಿವಿಧೆಡೆಗೆ ತೆರಳಲು ಆಗಮಿಸಿರುವ ಜನರು ಬೆಳಗ್ಗೆಯಿಂದ ಟರ್ಮಿನಲ್ 1ರಲ್ಲಿ ಕಾದು ಕುಳಿತ ದೃಶ್ಯಗಳು ಕಂಡುಬಂತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *