Headlines

ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!

ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!


ಇಂದಿರಾಗಾಂಧಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ವರ್ಷವಿಡೀ ಬೆಡ್ ಹಿಡಿದಿದ್ದ ಬಾಲಕ; ಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಗುಣಮುಖ!

ಹೊಸಕೋಟೆ, ಮಾ.31 : ಬಡ ಮಕ್ಕಳಿಗಾಗಿಯೇ ಮೀಸಲಾದ ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ವೈದ್ಯರ ನಿರ್ಲಕ್ಷ್ಯದ ಆರೋಪ ಭಾರಿ ಸಂಚಲನ ಮೂಡಿಸಿದೆ. ಸ್ಪೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಹೊಸಕೋಟೆಯ 14 ವರ್ಷದ ಬಾಲಕನಿಗೆ ಸರಿಯಾದ ಚಿಕಿತ್ಸೆ ನೀಡದೆ ಒಂದು ವರ್ಷ ಕಾಲ ಪರಿತಪಿಸುವಂತೆ ಆಸ್ಪತ್ರೆಯ ವಿರುದ್ಧ ಬಡ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕಳೆದೊಂದು ವರ್ಷದಿಂದ ಬೆಡ್ ಹಿಡಿದಿದ್ದ ಬಾಲಕನ ಪೋಷಕರ, ಇಂದಿರಾಗಾಂಧಿ ಆಸ್ಪತ್ರೆಗೆ ತಿಂಗಳಾನುಗಟ್ಟಲೆ ಕಾಣಿಸಿಕೊಂಡಿದ್ದಾರೆ. ಆದರೆ ವೈದ್ಯರ ಸಮಸ್ಯೆಯನ್ನು ಪತ್ತೆಹಚ್ಚುವಲ್ಲಿ ವಿಫಲವಾಗಿದೆ. ಬ್ರೈನ್, ಐ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ಗಳನ್ನು ಮಾಡಿದರೂ ಫಲಿತಾಂಶ ಶೂನ್ಯವಾಗಿತ್ತು. ಕೊನೆಯಲ್ಲಿ “ಬಾಲಕನಿಗೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿ ಆತನನ್ನು ಮನೆಗೆ ಕಳುಹಿಸಿದ್ದರು. ಇದರಿಂದ ಅಸಹಾಯಕಗೊಂಡಿದ್ದಾರೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯ ಮೊರೆ ಹೋಗಿದ್ದಾರೆ.

ಸಿಲಿಕಾನ್ ಸಿಟಿ ಆಸ್ಪತ್ರೆಯ ವೈದ್ಯರು ಬಾಲಕನ ಸಮಸ್ಯೆ ಸರಿಯಾಗಿ ಗುರುತಿಸಿ, ತುರ್ತು ಶಸ್ತ್ರಚಿಕಿತ್ಸೆ. ಕೇವಲ ಒಂದು ತಿಂಗಳಲ್ಲೇ ಬಾಲಕ ನಡೆದಾಡಿದ್ದು, ಅವನ ಆರೋಗ್ಯದಲ್ಲಿ ಗಣನೀಯ ಪ್ರಗತಿ ಕಂಡುಬಂದಿದೆ. “ದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಆಗದ ಚಿಕಿತ್ಸೆ ಸಣ್ಣ ಖಾಸಗಿ ಆಸ್ಪತ್ರೆಗಳಲ್ಲಿ ಏಕೆ ಸಾಧ್ಯವಾಗುತ್ತಿದೆ?” ಎಂದು ಬಾಲಕನ ಕುಟುಂಬ ಆಕ್ರೋಶ ವ್ಯಕ್ತಪಡಿಸಿದ್ದು, ಇಂದಿರಾಗಾಂಧಿ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ನಿಮ್ಮ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಈ ಕುರಿತು ಪ್ರತಿಕ್ರಿಯಿಸಿದ ಖಾಸಗಿ ಆಸ್ಪತ್ರೆಯ ಸರ್ಜನ್ ಡಾ. ಸುಪ್ರಿತ್, “ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಲು ಸೂಕ್ತ ಸಮಯಕ್ಕೆ ಸಿಗುತ್ತಿಲ್ಲ. ಆರೋಗ್ಯ ಇಲಾಖೆ ಈ ಬಗ್ಗೆ ತಕ್ಷಣ ಎಚ್ಚೆತ್ತು ಬಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *