
ಬೆಂಗಳೂರು, ಮಾರ್ಚ್ 18: ಅಂತರ್ಜಾತಿ ಸಂದರ್ಭ ಕುಟುಂಬಸ್ಥರಿಂದ ತೀವ್ರ ಆಕ್ಷೇಪ, ಬಹಿಷ್ಕಾರ ಸೇರಿ ಕೆಲ ಪ್ರಕರಣಗಳಲ್ಲಿ ಕೊಲೆಯೂ ನಡೆದಿರುವ ಉದಾಹರಣೆಗಳಿವೆ. ಹೀಗಾಗಿ ಅಂತರ್ಜಾತಿ ವಿವಾಹಿತರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆ ತರಲು ಮುಂದಾಗಿದೆ. ಈ ಸಂಬಂಧ ಸಭೆಯಲ್ಲಿ ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ ಮಾಡಬಾರದು, ಜಾತಿ ಶ್ರೇಣೀಕರಣ, ಸಂಪ್ರದಾಯಗಳ ಹೆಸರಿನಲ್ಲಿ ಹಿಂಸೆ ಮತ್ತು ಕಿರುಕುಳ ತಡೆಯಲು ಮುಂದಾಗಿದೆ. ಈ ವಿಧೇಯಕ ಕಾಯ್ದೆಯಾಗಿ ಜಾರಿಗೆ ಬಂದಿದ್ದೇ ಆದರೆ ಅಂತರ್ಜಾತಿ ವಿವಾಹಕ್ಕೆ ಹೆಚ್ಚಿನ ಮಾನ್ಯತೆ ಸಿಗಲಿದೆ.
ವಿಧೇಯಕ ಏನು ಹೇಳುತ್ತೆ?
- ಅಂತರ್ಜಾತಿ ಮದುವೆಯಾದ್ರೆ ಸಾಮಾಜಿಕ, ಆರ್ಥಿಕ ಬಹಿಷ್ಕಾರ ಹಾಕಲಾಗಿದೆ
- ಜೋಡಿ ವಾಸಸ್ಥಳದಿಂದ ಹೊರಹೋಗುವಂತೆ ಒತ್ತಾಯಿಸುವುದು ಅವರ ಕುಟುಂಬವನ್ನು ಹೊರಹಾಕುವುದು ಕಾನೂನುಬಾಹಿರ
- ಜಾತಿ, ಇಲ್ಲವೆ ಸಮುದಾಯದಲ್ಲಿ ಬಲವಂತವಾಗಿ ಸಂಪ್ರದಾಯ ಹೇರಲಾಗಿದೆ
- ಅಂತರ್ಜಾತಿ ವಿವಾಹಿತರಿಗೆ ಪೂಜಾ ಸ್ಥಳಗಳಿಗೆ ಪ್ರವೇಶ ನಿರಾಕರಿಸಲಾಗಿದೆ
- ಅಂತರ್ಜಾತಿ ವಿವಾಹಿತರಿಂದ ಕುಟುಂಬದ ಆಸ್ತಿ, ದಂಡ ಹಾಕಲಾಗಿದೆ
- ಕೆಲಸಕ್ಕೆ ಅಡ್ಡಿ, ಕೆಲಸ ಕೊಡಲು ಹಿಂದೇಟು ಹಾಕುವುದು ಅಪರಾಧ
- ಅಂರ್ಜಾತಿ ವಿವಾಹವಾಗಲು ಅವರ ಕುಟುಂಬಸ್ಥರು ವಿರೋಧಿಸಿದ್ದಾರೆ
- ಇಬ್ಬರು ವಯಸ್ಕರ ವಿವಾಹಕ್ಕೆ ಪೋಷಕರಿಗೆ ಅಗತ್ಯವಿಲ್ಲ
- ವಿವಾಹಿತ ಜೋಡಿಗೆ ಹಿಂಸೆ, ಮಾನಸಿಕ ನಿಂದನೆ ಕಾನೂನು ಬಾಹಿರ
- ದಂಪತಿಯನ್ನು ಬಲವಂತವಾಗಿ ದೂರ ಇಡುವ ಪ್ರಯತ್ನ ಸರಿಯಲ್ಲ. ಮದುವೆಯಾದ ಜೋಡಿಯನ್ನ ಕಿಡ್ನ್ಯಾಪ್ ಮಾಡುವುದು,
ಆರ್ಥಿಕ ಬಹಿಷ್ಕಾರ ಹಾಕುವುದು ಕಾನೂನು ಬಾಹಿರ - ದಂಪತಿಗೆ ಸಹಕಾರ ಕೊಟ್ಟವರ ಬಹಿಷ್ಕಾರ ಮಾಡುವುದು ಸರಿಯಲ್ಲ
- ಬ್ಯಾಂಕ್ ಖಾತೆ ಸ್ಥಗಿತ, ಉದ್ಯೋಗ ಕೊಟ್ಟವರ ಮೇಲೆ ಒತ್ತಡ ಅಪರಾಧ
- ಹಿಂಸೆ ನೀಡುವುದು, ಕಿರುಕುಳ ನೀಡುವುದು ಅಪರಾಧ
- ಬಲವಂತದ ಗರ್ಭಪಾತ ಗರ್ಭಸ್ರಾವಕ್ಕೆ ಒತ್ತಡ ಹೇರುವುದು ಅಪರಾಧ
- ಅಂತರ್ಜಾತಿ ವಿವಾಹವಾದವರನ್ನು ಬೇರ್ಪಡಿಸಿ ಬೇರೆ ಮದುವೆ ಮಾಡಿಸಲಾಯಿತು. ಒಂದು ವೇಳೆ ಮರ್ಯಾದಾ ಹತ್ಯೆ ಮಾಡಿದರೆ 5 ವರ್ಷ ಜೈಲು, ದಂಡ. ದಂಪತಿಯನ್ನು ಗಾಯಗೊಳಿಸಿದ್ರೂ 3 ಲಕ್ಷ ದಂಡ, 3 ವರ್ಷ ಜೈಲು
- ದಂಪತಿಯನ್ನು ಬೆದರಿಸಿದರೆ 5 ವರ್ಷ ಶಿಕ್ಷೆ, 2 ಲಕ್ಷ ರೂಪಾಯಿ ದಂಡ. ನಿರಂತರ ಬೆದರಿಕೆಗೆ 7 ವರ್ಷಗಳವರೆಗೆ ಶಿಕ್ಷೆಯನ್ನು ವಿಸ್ತರಿಸಬಹುದು
- ವಿವಾಹಿತ ಜೋಡಿ ವಿಚಾರದಲ್ಲಿ ಸಾಕ್ಷಿಗಳ ಗುರುತು, ವಿಳಾಸ ನೀಡಲಾಗಿಲ್ಲ
ಇದನ್ನೂ ಓದಿ: ದೀಧೀರ್ ಸಿಎಂ ಭೇಟಿಯೇಕೆ ಕಾಂಗ್ರೆಸ್ ನ ಹಿರಿಯ ಶಾಸಕರ ತಂಡ?
ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಮತ್ತು ಅಂತಹ ಜೋಡಿಗಳ ರಕ್ಷಣೆಗಾಗಿ ಹಲವು ಪ್ರಮುಖ ವಿಚಾರಗಳನ್ನು ವಿಧೇಯಕದಲ್ಲಿ ಸೇರಿಸಲಾಗಿದೆ. ಆರೋಪಿಗಳಿಗೆ ಜೋಡಿ ಕಠಿಣ ಶಿಕ್ಷೆಯಂತಹ ವಿಚಾರಗಳನ್ನು ಇದು ಒಳಗೊಂಡಿರುವ ಕಾರಣ, ಕಾಯ್ದೆಯಲ್ಲಿ ಅನ್ಯ ಜಾತಿ ವಿವಾಹವಾಗುವ ಕಾನೂನಿನ ಬಲವೂ ಸಿಕ್ಕಂತಾಗುತ್ತದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.