ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ರ ಆವೃತ್ತಿಯ ಮಧ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ತನ್ನ ಬೌಲಿಂಗ್ ಪಂದ್ಯಗಳಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಬದಲಾವಣೆಯೊಂದಿಗೆ ಎಸ್ಆರ್ಹೆಚ್ ತಂಡಕ್ಕೆ ಲಂಕಾ ವೇಗಿ ಎಂಟ್ರಿ ಕೊಟ್ಟಿದ್ದಾರೆ.
ಮಾರ್ಚ್ 28 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಮೊದಲ ಪಂದ್ಯಕ್ಕೂ ಮುನ್ನ ನೆಟ್ಸ್ನಲ್ಲಿ ಬ್ಯಾಟಿಂಗ್ ಮಾಡುವಾಗ ಇಂಗ್ಲೆಂಡ್ ಆಟಗಾರ ಬ್ರೈಡನ್ ಕಾರ್ಸ್ ಅವರ ಕೈಗೆ ಬಲವಾದ ಗಾಯವಾಗಿತ್ತು. ಈ ಗಾಯದ ಕಾರಣ ಇದೀಗ ಕಾರ್ಸ್ ಇದೀಗ ಐಪಿಎಲ್ನಿಂದ ಹೊರಗುಳಿದಿದ್ದಾರೆ.
ಅತ್ತ ಬ್ರೈಡನ್ ಕಾರ್ಸ್ನಿಂದ ಹೊರಬೀಳುತ್ತಿದ್ದಂತೆ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಶ್ರೀಲಂಕಾದ ಎಡಗೈ ವೇಗಿ ದಿಲ್ಶನ್ ಮಧುಶಂಕ ಅವರ ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಎಸ್ಆರ್ಹೆಚ್ ತಂಡದ ಮುಂದಿನ ಪಂದ್ಯಗಳಿಗೆ ಮಧುಶಂಕ ಲಭ್ಯರಿರಲಿದ್ದಾರೆ.
ದಿಲ್ಶನ್ ಮಧುಂಕ ಶ್ರೀಲಂಕಾ ಪರ ಸೀಮಿತ ಪಂದ್ಯಗಳ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ. ಜೊತೆಗೆ ಆರಂಭಿಕ ಘಟಕಗಳಲ್ಲಿ ಚೆಂಡನ್ನು ಸ್ವಿಂಗ್ ಮಾಡುವ ಕಲೆಯನ್ನು ಕರಗತವಾಗಿರುವ ಮಧುಶಂಕ ಎಂಟ್ರಿಯು ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್, ಜಯದೇವ್ ಕುಮಾರ್ ಝೀಸಾ ಉನದ್ಕತ್, ಎಶಾ ಉನದ್ಕತ್ ಸಲೀಲ್ ಅರೋರ, ಸಾಕಿಬ್ ಹುಸೈನ್, ಓಮ್ಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್ ಸ್ಟೋನ್ಸ್, ಶಿವಂ ಮಾವಿ, ದಿಲ್ಶನ್ ಮಧುಶಂಕ.




