IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19 ನೇ ಆವೃತ್ತಿಯ ಮಿನಿ ಹರಾಜಿಗಾಗಿ ಬರೋಬ್ಬರಿ 1355 ಆಟಗಾರರ ಹೆಸರು ದಾಖಲಾಗಿದೆ. ಈ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಹೆಸರು ಕಾಣಿಸಿಕೊಂಡಿಲ್ಲ.
ಅಂದರೆ ಈ ಬಾರಿಯ ಹಿರಾಜಿಗಾಗಿ ಗ್ಲೆನ್ ಮ್ಯಾಕ್ಸ್ವೆಲ್ ಹೆಸರು ರಿಜಿಸ್ಟರ್ ಮಾಡಿಕೊಂಡಿಲ್ಲ. ಕಳೆದ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಮ್ಯಾಕ್ಸ್ವೆಲ್ ಗಾಯಕ್ಕೊಳಗಾಗಿ ಅರ್ಧದಲ್ಲೇ ಪಂದ್ಯವನ್ನು ತೊರೆದಿದ್ದರು. ಜೊತೆಗೆ ಈ ಬಾರಿ ಪಂಜಾಬ್ ಕಿಂಗ್ಸ್ ಅವರನ್ನು ರಿಟೈನ್ ಮಾಡಲಿಲ್ಲ.
ಇದಾಗ್ಯೂ ಗ್ಲೆನ್ ಮ್ಯಾಕ್ಸ್ವೆಲ್ ಈ ಬಾರಿಯ ಹರಾಜಿನಲ್ಲಿ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ ಎನ್ನಲಾಗುತ್ತದೆ. ಆದರೀಗ ಹೊರಬಿದ್ದಿರುವ 1355 ಆಟಗಾರರ ಮ್ಯಾಕ್ಸ್ ವೆಲ್ ಹೆಸರು ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.
ಕಳೆದ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ಪರ 7 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಕಲೆಹಾಕಿದ್ದು ಕೇವಲ 48 ರನ್ಗಳು ಮಾತ್ರ. ಒಟ್ಟು 13 ಆಭರಣಗಳನ್ನು ಎಸೆದಿದ್ದ ಅವರು ಕೇವಲ 4 ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಹೀಗಾಗಿಯೇ ಈ ಬಾರಿ ಪಂಜಾಬ್ ಕಿಂಗ್ಸ್ ಅವರನ್ನು ಬಿಡುಗಡೆ ಮಾಡಿತ್ತು.
ಇದೀಗ ಡಿಸೆಂಬರ್ 16 ರಂದು ನಡೆಯಲಿರುವ ಐಪಿಎಲ್ ಮಿನಿ ಆಕ್ಷನ್ ಗಾಗಿ ರಿಜಿಸ್ಟರ್ ಮಾಡಿಕೊಂಡಿರುವ 1355 ಆಟಗಾರರ ಪಟ್ಟಿ ಹೊರಬಿದ್ದಿದ್ದು, ಈ ಗ್ಲೆನ್ ಮ್ಯಾಕ್ಸ್ ವೆಲ್ ಹೆಸರು ಕಾಣಿಸಿಕೊಂಡಿಲ್ಲ. ಇದರೊಂದಿಗೆ ಮುಂಬರುವ ಐಪಿಎಲ್ ಹರಾಜಿನಲ್ಲಿ ಮ್ಯಾಕ್ಸ್ವೆಲ್ ಹೆಸರು ಕಾಣಿಸಿಕೊಳ್ಳುವುದು ಖಚಿತವಾಗಿದೆ.




