IPL 2026: ಇಂಡಿಯನ್ ಪ್ರೀಮಿಯರ್ ಪಂದ್ಯಾವಳಿಯಲ್ಲಿ 14 ಪಂದ್ಯಗಳು ಮುಗಿದಿವೆ. ಇದಾಗ್ಯೂ ಕೆಲ ಸ್ಟಾರ್ ಆಟಗಾರರು ಇನ್ನೂ ಕೂಡ ತಂಡವನ್ನು ಕೂಡಿಕೊಂಡಿಲ್ಲ. ಅಂದರೆ ಗಾಯದ ಸಮಸ್ಯೆಯ ಕಾರಣ ಐಪಿಎಲ್ನ ಆರಂಭಿಕ ಪಂದ್ಯಗಳಿಗೆ ಅಲಭ್ಯ. ಇದೀಗ ಈ ಆಟಗಾರ ಇಂಜುರಿ ಅಪ್ಡೇಟ್ ಆಗಿದ್ದು, ಯಾವ ಆಟಗಾರ ಯಾವಾಗ ಕಣಕ್ಕಿಳಿಯಲಿದ್ದಾರೆ ಎಂದು ನೋಡುವುದಾದರೆ…
ಎಂ.ಎಸ್. ಧೋನಿ (CSK): ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಿಂತೆ ಮುಂದಿನ ಪಂದ್ಯದಲ್ಲೂ ಮುಂದುವರಿಯಲಿದೆ. ಏಕೆಂದರೆ ಕಾಲಿನ ಸ್ನಾಯು ಸೆಳೆತದಿಂದ (Calf Strain) ಧೋನಿ ಇನ್ನೂ ಚೇತರಿಸಿಕೊಂಡಿಲ್ಲ. ಸದ್ಯದ ವರದಿಗಳ ಪ್ರಕಾರ, ಏಪ್ರಿಲ್ 11 ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯಕ್ಕೆ ಧೋನಿ ಅಲಭ್ಯರಾಗಲಿದ್ದಾರೆ.
ಮಿಚೆಲ್ ಸ್ಟಾರ್ಕ್ (DC): ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಬೌಲರ್ ಮಿಚೆಲ್ ಸ್ಟಾರ್ಕ್ ಭುಜ ಮತ್ತು ಮೊಣಕೈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸದ್ಯ ಆಸ್ಟ್ರೇಲಿಯಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸ್ಟಾರ್ಕ್ ಏಪ್ರಿಲ್ 21 ರಂದು ಸುಮಾರಿಗೆ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ.
ಡೆವಾಲ್ಡ್ ಬ್ರೆವಿಸ್ (CSK): ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಸ್ಫೋಟಕ ದಾಂಡಿಗ ಡೆವಾಲ್ಡ್ ಬ್ರೆವಿಸ್ ಅವರು ತಮ್ಮ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಏಪ್ರಿಲ್ 11 ರಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಅವರು ಲಭ್ಯವಾಗಲಿದ್ದಾರೆ ಎಂದು ಎಸ್ಎಸ್ಕೆ ತಂಡ ಖಚಿತಪಡಿಸಿದೆ.
ವನಿಂದು ಹಸರಂಗ (LSG): ಶ್ರೀಲಂಕಾದ ಆಲ್ರೌಂಡರ್ ಹಸರಂಗ ಅವರ ವಿಷಯದಲ್ಲಿ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಕಾಲಿನ ಸ್ನಾಯು ಹರಿತದ (ಮಂಡಿರಜ್ಜು ಕಣ್ಣೀರು) ಸಮಸ್ಯೆಯಿಂದ ಬಳಲುತ್ತಿರುವ ಅವರು ಇನ್ನೂ ಫಿಟ್ನೆಸ್ ಪರೀಕ್ಷೆಯನ್ನು ಪೂರ್ಣಗೊಳಿಸಬೇಕಾಗಿದೆ. ಹೀಗಾಗಿ ಅವರು ಈ ಸೀಸನ್ ನಲ್ಲಿ ಆಡುವುದು ಅನುಮಾನ ಎನ್ನುತ್ತಿದ್ದಾರೆ.
ಮಥೀಶ ಪತಿರಾಣ (ಕೆಕೆಆರ್): ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವೇಗಿ ಪತಿರಾಣ ಅವರು ಫಿಟ್ನೆಸ್ ಪರೀಕ್ಷೆಗೆ ಒಳಗಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ 16ರ ಪಂದ್ಯಕ್ಕೆ ಅವರು ಕೊಲ್ಕತ್ತಾ ನೈಟ್ ರೈಡರ್ಸ್ ಪರ ಮೈದಾನಕ್ಕಿಳಿಯಲಿದ್ದಾರೆ.





