ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ರ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಕೊನೆಗೂ ಸಿಹಿ ಸಿಕ್ಕಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಶ ಪತಿರಾಣ ಅವರಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಅಂತಿಮವಾಗಿ ‘ನಿರಕ್ಷೇಪಣಾ ಪತ್ರ’ (NOC) ನೀಡಿದ್ದು, ಅವರು ಶೀಘ್ರದಲ್ಲೇ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಟಿ20 ವೇಳೆ ಹ್ಯಾಮ್ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ಮಥೀಶ ಪತಿರಾಣ, ಐಪಿಎಲ್ನ ಆರಂಭಿಕ ಪಂದ್ಯಗಳಿಂದ ವಂಚಿತವಾಗಿದೆ. ಶ್ರೀಲಂಕಾದಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದ ಅವರು ಈಗ ಸಂಪೂರ್ಣ ಫಿಟ್ ಆಗಿದ್ದು, ಮಂಡಳಿಯಿಂದ ಐಪಿಎಲ್ ಪ್ರದರ್ಶನ ಹಸಿರು ನಿಶಾನೆ ಪಡೆದಿದ್ದಾರೆ.
ಅದರಂತೆ ಇಂದು (ಏಪ್ರಿಲ್ 12) ಅವರು ಶ್ರೀಲಂಕಾದಿಂದ ನೇರವಾಗಿ ಪ್ರಯಾಣ ಬೆಳೆಸುತ್ತಾರೆ, ಅಲ್ಲಿ ಕೆಕೆಆರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇತ್ತ ಮಥೀಶ ಪತಿರಾಣ ಅವರ ಆಗಮನವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬಲವನ್ನು ಹೆಚ್ಚಿಸಲಿದೆ. ಏಕೆಂದರೆ ಈ ಬಾರಿಯ ವೈಫಲ್ಯದಲ್ಲಿ ಕೆಕೆಆರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೂ ಬೌಲಿಂಗ್ ಕಾರಣ ಸತತ ಮೂರು ಪಂದ್ಯಗಳನ್ನು ಸೋತಿದೆ.
ಇದೀಗ ಡೆತ್ ಸ್ಪೆಷಲಿಸ್ಟ್ ಆಗಿರುವ ಮಥೀಶ ಪತಿರಾಣ ಅವರ ಆಗಮನವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬೌಲಿಂಗ್ ಬಲವನ್ನು ಹೆಚ್ಚಿಸಲಿದೆ. ಇತ್ತ ಏಪ್ರಿಲ್ 14 ರಂದು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೆಕೆಆರ್ ಸಿದ್ಧತೆಗಳನ್ನು ಆರಂಭಿಸಿದ್ದು, ಈ ಪಂದ್ಯದ ಮೂಲಕ ಮಥೀಶ ಪತಿರಾಣ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಪಾದಾರ್ಪಣೆ ಮಾಡಲಿದ್ದಾರಾ ಕಾದು ನೋಡಬೇಕಿದೆ.
ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ಆಂಗ್ ಕ್ರಿಶ್ ರಘುವಂಶಿ, ಅನುಕುಲ್ ರಾಯ್, ಮನೀಶ್ ಪಾಂಡೆ, ರಮಣದೀಪ್ ಸಿಂಗ್, ರಿಂಕು ಸಿಂಗ್, ರೋವ್ ಮನ್ ಪೊವೆಲ್, ಸುನಿಲ್ ನರೈನ್, ಉಮ್ರಾನ್ ಮಲಿಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕ್ಯಾಮರೋನ್ ಪತಿ ಗ್ರೀನ್, ಫಿನ್ಜನ್, ಮಠ, ತೇಕ್ ಕಾರ್ವಿ ಅಲೆ, ಮಠ ಪ್ರಶಾಂತ್ ಸೋಲಂಕಿ, ರಾಹುಲ್ ತ್ರಿಪಾಠಿ, ಟಿಮ್ ಸೈಫರ್ಟ್, ಬ್ಲೆಸ್ಸಿಂಗ್ ಮುಝರಬಾನಿ, ಸಾರ್ಥಕ್ ರಂಜನ್, ದಕ್ಷ್ ಕಮ್ರಾ, ರಚಿನ್ ರವೀಂದ್ರ, ಆಕಾಶ್ ದೀಪ್, ಹರ್ಷಿತ್ ರಾಣಾ (ಅಲಭ್ಯ).




