IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 20ನೇ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು (ಏ.12) ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಿದ್ದಾರೆ. ಆ ಆಟಗಾರರೆಂದರೆ…
ಅಥರ್ವ ಅಂಕೋಲೇಕರ್: ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್ಸಿಬಿ ವಿರುದ್ಧದ ಅಥರ್ವ ಕಾಣಿಸುವುದಿಲ್ಲ.
ವಿಲ್ ಜ್ಯಾಕ್ಸ್: ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ವಿಲ್ ಜ್ಯಾಕ್ಸ್ ಇನ್ನೂ ತಂಡವನ್ನು ಒಳಗೊಂಡಿಲ್ಲ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂದಿನ ಮ್ಯಾಚ್ಗೂ ವಿಲ್ ಜ್ಯಾಕ್ಸ್ ಅಲಭ್ಯರಾಗಲಿದ್ದಾರೆ.
ನುವಾನ್ ತುಷಾರ: ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕಾ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಇನ್ನೂ ಸಹ ಎನ್ಒಸಿ ನೀಡಿಲ್ಲ. ಇದೆ ಅವರಿಗೆ ಇನ್ನೂ ಸಹ ಆರ್ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ -19 ರ 20 ನೇ ಮ್ಯಾಚ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿವೆ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ.




