ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಆಕ್ಷನ್‌ಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ರವೀಂದ್ರ ಜಡೇಜಾ (ರವೀಂದ್ರ ಜಡೇಜಾ) ಅವರನ್ನು ರಾಜಸ್ಥಾನ್ ರಾಯಲ್ಸ್‌ಚಾಂಚೈಸಿ ಟ್ರೇಡ್ ಮಾಡಿಕೊಂಡಿದ್ದಾರೆ. ಆರ್ ಆರ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರಿಗೆ ನೀಡಿ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಇದೀಗ ಈ ಟ್ರೇಡ್ ಅಧಿಕೃತವಾಗಿದ್ದು, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಜಡೇಜಾ ಎಂಟ್ರಿಯ ವಿಡಿಯೋವನ್ನು ಆರ್ ಆರ್ ಫ್ರಾಂಚೈಸಿ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದರೊಂದಿಗೆ ಕಳೆದ 12 ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರವೀಂದ್ರ ಜಡೇಜಾ ಸಿಎಸ್ಕೆ ಕೆರಿಯರ್ ಯುಗಾಂತ್ಯವಾಗಿದೆ. ಅಷ್ಟೇ ಅಲ್ಲದೆ ಜಡೇಜಾ ಮತ್ತೆ ತನ್ನ ಮಾಜಿ ತಂಡಕ್ಕೆ ಮರಳಿ. ಅಂದರೆ ಜಡೇಜಾ 2008 ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದರು. ಇದೀಗ 15 ವರ್ಷಗಳ ಬಳಿಕ ಮತ್ತೆ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಸೇರ್ಪಡೆಯಾಗಿದೆ.
ಕಳೆದ 12 ವರ್ಷಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 200 ಪಂದ್ಯಗಳನ್ನಾಡಿರುವ ರವೀಂದ್ರ ಜಡೇಜಾ 149 ಇನಿಂಗ್ಸ್‌ಗಳ ಮೂಲಕ 2354 ರನ್ ಕಲೆಹಾಕಿದ್ದಾರೆ. ಇದರ ನಡುವೆ 5 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ 3 ಬಾರಿ ಸಿಎಸ್‌ಕೆ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಜಡೇಜಾ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಐಪಿಎಲ್‌ನ ಚೊಚ್ಚಲ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಕಣಕ್ಕಿಳಿಯಲು ರವೀಂದ್ರ ಜಡೇಜಾ ಸಜ್ಜಾಗಿದ್ದಾರೆ.