IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಧ್ಯಭಾಗದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ತನ್ನ ತಂಡದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಬದಲಾವಣೆಯಲ್ಲಿ ಎಸ್ಆರ್ಹೆಚ್ ತಂಡಕ್ಕೆ ಇಬ್ಬರು ವಿದೇಶಿ ಆಟಗಾರರು ಎಂಟ್ರಿ ಕೊಟ್ಟಿದ್ದಾರೆ. ಅವರೆಂದರೆ…
ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಇಂಗ್ಲೆಂಡ್ ವೇಗಿ ಡೇವಿಡ್ ಪೇನ್ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಸೌತ್ ಆಫ್ರಿಕಾದ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಅವರನ್ನು ಎಸ್ ಆರ್ಹೆಚ್ ತಂಡ ಆಯ್ಕೆ ಮಾಡಿಕೊಂಡಿದೆ.
ಅದೇ ವೇಳೆ ಧರಿಸಿ ಪಂದ್ಯದಿಂದ ಹೊರಬಿದ್ದಿರುವ ಇಂಗ್ಲೆಂಡ್ ಆಲ್ರೌಂಡರ್ ಬ್ರೈಡನ್ ಅವರ ಬದಲಿಗೆ ಸನ್ರೈಸರ್ಸ್ ಹೈದರಾಬಾದ್ ಶ್ರೀಲಂಕಾ ವೇಗಿ ದಿಲ್ಶನ್ ಮಧುಶಂಕ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡವು ಇಂದು (ಏ.18) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ, ಈ ಪಂದ್ಯದ ಆಯ್ಕೆಗೆ ದಿಲ್ಶನ್ ಮಧುಶಂಕ ಲಭ್ಯವಾಗಲಿದೆ. ಆದರೆ ಜೆರಾಲ್ಡ್ ಕೋಟ್ಝಿ ಮುಂದಿನ ಮ್ಯಾಚ್ಗೂ ಮುನ್ನ ಎಸ್ಆರ್ಹೆಚ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಇಶಾನ್ ಕಿಶನ್ (ಉಪನಾಯಕ), ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಇಶಾನ್ ಕಿಶನ್, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಕಮಿಂದು ಮೆಂಡಿಸ್, ಹರ್ಷಲ್ ಪಟೇಲ್ ಅನ್ಸಾರಿ, ಶಿವಾಂಗ್ ಕುಮಾರ್, ಸಲೀಲ್ ಅರೋರ, ಸಾಕಿಬ್ ಹುಸೈನ್, ಒಮ್ಕಾರ್ ತರ್ಮಲೆ, ಅಮಿತ್ ಕುಮಾರ್, ಪ್ರಫುಲ್ ಹಿಂಗೆ, ಕ್ರೇನ್ಸ್ ಫುಲೆಟ್ರಾ, ಲಿಯಾಮ್ ಲಿವಿಂಗ್ ಸ್ಟೋನ್ಸ್, ಶಿವಂ ಮಾವಿ, ದಿಲ್ಶನ್ ಮಧುಶಂಕ, ಜೆರಾಲ್ಡ್ ಕೋಟ್ಝಿ.




