
ಬೆಂಗಳೂರು, ಮಾರ್ಚ್ 27: ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಮೈದಾನದಲ್ಲಿ ನಾಳೆ IPL ಉದ್ಘಾಟನಾ ಪಂದ್ಯ. ಸಕಲ ಭದ್ರತೆ ಕೂಡ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಕಷನರ್ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3 ಹಂತದಲ್ಲಿ ಸೆಕ್ಯುರಿಟಿ ಇರಲಿದೆ. ಆರ್ಇಎಫ್ ಮತ್ತು ಗರುಡ ಟೀಂ, ಪಿಕಪ್ ಸ್ಕ್ವಾಡ್ ಇದೆ. ಭದ್ರತೆಗೆ 2,500 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಆಫ್‌ಲೈನ್ ಟಿಕೆಟ್ ಸಿಗುತ್ತೆ ಎಂದು ಯಾರು ಬರಬಾರದು. ಮೈದಾನ ಬಳಿ ರಸ್ತೆಗೆ ಬಂದು ನಿಲ್ಲುವವರಿಗೆ ಅವಕಾಶ ನೀಡಲ್ಲ. ಟಿಕೆಟ್ ಇಲ್ಲದಿದ್ದರೆ ಮನೆಯಲ್ಲಿ ಕುಳಿತು ಪಂದ್ಯವನ್ನ ನೋಡಿ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.