ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿರುವುದು, ಮೊಬೈಲ್ ಮತ್ತು ಟಿವಿಗಳ ಬಳಕೆಯ ವೀಡಿಯೊಗಳು ವೈರಲ್ ಆಗಿವೆ. ಜೈಲಿನಲ್ಲಿ ಭಯೋತ್ಪಾದಕರು ಮತ್ತು ಅತ್ಯಾಚಾರಿಗಳ ಕೈಯಲ್ಲಿ ಮೊಬೈಲ್ ಫೋನ್‌ಗಳು ಇವೆ. ಜೈಲಿನಲ್ಲೇ ವಿಚಾರಣಾಧೀನ ಕೈದಿ ಜನ್ಮದಿನ ಆಚರಿಸಿಕೊಂಡ ದೃಶ್ಯಗಳೂ ಈ ಹಿಂದೆ ವೈರಲ್ ಆಗಿದ್ದವು. ಅಕ್ರಮಗಳ ಹಿಂದೆ ಅಧಿಕಾರಿಗಳು ಕೈವಾಡವಿದ್ದು, ಹುದ್ದೆಗಳಿಗಾಗಿ ಅಥವಾ ಹಣಕಾಸಿನ ಲಾಭಕ್ಕಾಗಿ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಎಂಬ ಅನುಮಾನವಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಉನ್ನತ ಹುದ್ದೆಗಳಿಗೆ ಭಾರಿ ಬೇಡಿಕೆ ಇದೆ, ಇಲಿ ವಿಐಪಿ ಖೈದಿಗಳಿಗೆ ಸೌಲಭ್ಯ ನೀಡಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಹಿರಿಯ ಅಧಿಕಾರಿಗಳ ಟಾರ್ಗೆಟ್ ಮಾಡುವ ಉದ್ದೇಶದಿಂದ ಸಿಬ್ಬಂದಿಯೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ. ವಿಚಾರವನ್ನು ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಅಧಿಕಾರಿಗಳ ಜೊತೆ ಸಭೆ. ಕಾರಾಗೃಹ ಎಡಿಜಿಪಿ ಬಿ.ದಯಾನಂದ ವಿದೇಶದಲ್ಲಿರುವ ಹಿನ್ನೆಲೆ ಅವರ ಅನುಪಸ್ಥಿತಿಯಲ್ಲಿ ಸಭೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.