Headlines

IPL 2026: ಪ್ಯಾಟ್‌ ಕಮಿನ್ಸ್ ಬರುವವರೆಗೂ ಈ ಬಿಗ್ ಹಿಟ್ಟರ್‌ಗೆ ನಾಯಕತ್ವ ಪಟ್ಟ ಕಟ್ಟಿದ ಸನ್‌ರೈಸರ್ಸ್ ಹೈದರಾಬಾದ್!

IPL 2026: ಪ್ಯಾಟ್‌ ಕಮಿನ್ಸ್ ಬರುವವರೆಗೂ ಈ ಬಿಗ್ ಹಿಟ್ಟರ್‌ಗೆ ನಾಯಕತ್ವ ಪಟ್ಟ ಕಟ್ಟಿದ ಸನ್‌ರೈಸರ್ಸ್ ಹೈದರಾಬಾದ್!

IPL 2026: ಪ್ಯಾಟ್‌ ಕಮಿನ್ಸ್ ಬರುವವರೆಗೂ ಈ ಬಿಗ್ ಹಿಟ್ಟರ್‌ಗೆ ನಾಯಕತ್ವ ಪಟ್ಟ ಕಟ್ಟಿದ ಸನ್‌ರೈಸರ್ಸ್ ಹೈದರಾಬಾದ್!

ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿರುವಾಗಲೇ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇಬ್ಬರು ಸ್ಪೋಟಕ ಬ್ಯಾಟರ್‌ಗಳಿಗೆ ನಾಯಕ ಹಾಗೂ ಉಪನಾಯಕ ಪಟ್ಟ ಕಟ್ಟಿದೆ. ಈ ಕುರಿತಾದ ಮಹತ್ವದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.

2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಿಕ ಪಂದ್ಯಗಳಿಗೆ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್‌ ಅಲಭ್ಯರಾಗಿದ್ದಾರೆ. ಹೀಗಾಗಿ ಕಮಿನ್ಸ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ವೇಗಿ ಪ್ಯಾಟ್ ಕಮಿನ್ಸ್ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆರಂಭಿಕ ಐಪಿಎಲ್ ಪಂದ್ಯಕ್ಕೆ ಕಮಿನ್ಸ್ ಅಲಭ್ಯರಾಗಿದ್ದಾರೆ. ಇನ್ನು ಮತ್ತೋರ್ವ ಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ, ಆರೆಂಜ್ ಆರ್ಮಿಯ ಉಪನಾಯಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇವರಿಬ್ಬರೂ ಹಂಗಾಗಿಯಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಹಾಗೂ ಉಪನಾಯಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಸಂಪೂರ್ಣ ಫಿಟ್ ಆಗಿ ತಂಡ ಕೂಡಿಕೊಂಡ ಬಳಿಕ ಪ್ಯಾಟ್ ಕಮಿನ್ಸ್ ಅವರೇ ನಾಯಕರಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಸದ್ಯದ ಕೆಲ ಮಾಧ್ಯಮ ವರದಿಗಳ ಪ್ರಕಾರ, ಪ್ಯಾಟ್ ಕಮಿನ್ಸ್ ಸನ್‌ರೈಸರ್ಸ್ ಹೈದರಾಬಾದ್ ತಂಡವು ಆಡಲಿರುವ ಮೊದಲ ಮೂರು ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಏಪ್ರಿಲ್ 02ರಂದು ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಏಪ್ರಿಲ್ 05ರಂದು ತವರಿನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 30 ಪಂದ್ಯಗಳನ್ನಾಡಿ 15 ಗೆಲುವು ಹಾಗೂ 14 ಸೋಲು ಕಂಡಿದೆ. ಇನ್ನೊಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಹೊರಬಿದ್ದಿರಲಿಲ್ಲ. ಇನ್ನು 2024ರ ಐಪಿಎಲ್‌ನಲ್ಲಿ ಕಮಿನ್ಸ್ ನಾಯಕತ್ವದಲ್ಲೇ ಆರೆಂಜ್ ಆರ್ಮಿ ಫೈನಲ್ ಪ್ರವೇಶಿಸಿತ್ತು. ಆದರೆ ಪ್ರಶಸ್ತಿ ಸುತ್ತಿನಲ್ಲಿ ಕೆಕೆಆರ್ ಎದುರು 6 ವಿಕೆಟ್ ಸೋಲು ಅನುಭವಿಸಿತ್ತು.

ಇನ್ನು ಐಪಿಎಲ್‌ನಲ್ಲಿ ನೂರಕ್ಕೂ ಅಧಿಕ ಪಂದ್ಯಗಳನ್ನಾಡಿರುವ ಇಶಾನ್ ಕಿಶನ್ ಸದ್ಯ ರೆಡ್ ಹಾಟ್ ಫಾರ್ಮ್‌ನಲ್ಲಿದ್ದಾರೆ. ಇದಷ್ಟೇ ಅಲ್ಲದೇ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮೊದಲ ಬಾರಿಗೆ ಝಾರ್ಖಂಡ್ ತಂಡವನ್ನು ನಾಯಕನಾಗಿ ಇಶಾನ್ ಕಿಶನ್ ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇದೀಗ ಇಶಾನ್ ಕಿಶನ್ ನಾಯಕತ್ವದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Source link

Leave a Reply

Your email address will not be published. Required fields are marked *