
ರಾಯಚೂರು, ಮಾರ್ಚ್ 15: ಇಸ್ರೇಲ್-ಇರಾನ್ ಯುದ್ಧದ ಪರಿಣಾಮವಾಗಿ, ಕರ್ನಾಟಕದ ಭತ್ತದ ನಾಡ ರಾಯಚೂರಿನ ರೈಸ್ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ವಿದೇಶಗಳಿಗೆ ರಫ್ತಾಗುತ್ತಿದ್ದ ಅಪಾರ ಪ್ರಮಾಣದ ಅಕ್ಕಿ ಸಾಗಾಟ ಸಂಪೂರ್ಣ ಸ್ಥಗಿತಗೊಂಡಿದ್ದು, ರೈಸ್ ಮಿಲ್ಲರ್ಸ್ ಅಸೋಸಿಯೇಷನ್ ಆತಂಕ ವ್ಯಕ್ತಪಡಿಸಿದೆ. ರಾಯಚೂರಿನಿಂದ ಯುರೋಪ್, ಅರಬ್, ಆಫ್ರಿಕಾ ಮತ್ತು ಅಮೆರಿಕ ಸೇರಿದಂತೆ ಹಲವು ದೇಶಗಳಿಗೆ ಸೋನಾಮಸೂರಿ ಮತ್ತು ಆರ್.ಎನ್.ಆರ್.ನಂತಹ ಉತ್ತಮ ಗುಣಮಟ್ಟದ ಅಕ್ಕಿ ರಫ್ತಾಗುತ್ತಿದೆ.
ಸದ್ಯದ ಬೇಡಿಕೆ ಕುಸಿದಿದೆ. ಇದು ಮುಂದುವರಿದರೆ ಮಿಲ್ಗಳು ಬಂದ್ ಆಗುವ ಅಪಾಯವಿದೆ. ಸಾಲಗಳು, ನೌಕರರ ವೇತನ ಮತ್ತು ನಿರ್ವಹಣಾ ವೆಚ್ಚಗಳು ರೈಸ್ ಮಿಲ್ಗೆ ದೊಡ್ಡ ಹೊರೆಯಾಗಿ ಪರಿಣಮಿಸಿವೆ. ಈ ಪರಿಸ್ಥಿತಿ ಏಪ್ರಿಲ್ನಲ್ಲಿ ಹೊಸ ಬತ್ತದ ಫಸಲು ಬಂದಾಗ ರೈತರಿಗೆ ಆರ್ಥಿಕ ಸಂಕಷ್ಟ ತರಲಿದೆ ಎಂದು ರೈಸ್ ಮಿಲ್ಲರ್ಸ್ ಅಸೋಸಿಯೇಷನ್ನ ರಾಜ್ಯ ಕಾರ್ಯಾಧ್ಯಕ್ಷ ಸಾವಿತ್ರಿ ಪುರುಷೋತ್ತಮ್. ಯುದ್ಧ ಪರಿಸ್ಥಿತಿ ಮುಂದುವರಿದರೆ ರಾಜ್ಯದಾದ್ಯಂತ 2000ಕ್ಕೂ ಹೆಚ್ಚು ರೈಸ್ ಮಿಲ್ಗಳು ಮತ್ತು ರೈತರು ತೀವ್ರವಾಗಿ ಬಾಧಿತರಾಗಲಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ