ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ?

ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ?


ಬಳ್ಳಾರಿ, ಫೆಬ್ರವರಿ 27: ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿಶೇಷ ನ್ಯಾಯಾಲಯದ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟವಾಗಿದೆ. ಹೀಗಾಗಿ ಆ ಹಣವನ್ನು ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಜೊತೆಗೆ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ ರೆಡ್ಡಿ ನಡೆಸುತ್ತಿರುವ ಗಣಿಗಾರಿಕೆ ಕುರಿತು ವರದಿ ಮಾಡಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *