Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ


Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಫ್ರೂಟ್ಸ್, ಹೆಲ್ತಿ ಫುಡ್ ಇಂಥವುಗಳ ಖರೀದಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡಿದೆ. ನಿಮ್ಮಲ್ಲಿ ಕೆಲವರಿಗೆ ಕಿವಿಗೆ ಸಂಬಂಧಿಸಿದ ತೊಂದರೆಗಳು ಎದುರಾಗಲಿವೆ. ಅಂತಹ ಸಂದರ್ಭ ವೈದ್ಯರು ಸಲಹೆ ಪಡೆದುಕೊಳ್ಳುವುದು ಒಳ್ಳೆಯದು. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಂದೂಡುವುದಕ್ಕೆ ಹೋಗಬೇಡಿ. ಇನ್ನು ಕಾರಣವೇ ಇಲ್ಲದೆ ನಿಮ್ಮ ಮೇಲೆ ಹಗೆ ಸಾಧಿಸುವುದಕ್ಕೆ ಪ್ರಯತ್ನ ಮಾಡದೆ ಇರುವವರಿಗೆ ತಪ್ಪಿನ ಅರಿವಾಗಿ. ತಮ್ಮ ತಪ್ಪಿಗೆ ಕ್ಷಮೆ ಕೂಡ ಕೇಳಲಿದ್ದಾರೆ

ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಏನು ಆಗುತ್ತಿದೆ ಎಂದು ಗೊತ್ತೇ ಇಲ್ಲದಂತೆ ನಿಮ್ಮ ಪರಿಸ್ಥಿತಿ ಆಗಲಿದೆ. ಯಾವುದೇ ತೀರ್ಮಾನ ಮಾಡಿದರೂ ಸಮಾಧಾನ ತರುವಂಥದ್ದೇನೂ ಆಗಬಹುದು ಎಂಬ ವಿಶ್ವಾಸ ನಿಮ್ಮಲ್ಲಿ ಮೂಡುವುದಿಲ್ಲ. ನಿಮ್ಮ ಬಳಿಯಂಥ ವಾಹನ ಒಂದನ್ನು ಮಾರಾಟ ಮಾಡುವುದಕ್ಕೆ ಮುಂದಾಗಿದೆ. ಕುಟುಂಬದ ಸದಸ್ಯರಿಗೆ ಈ ಬಗ್ಗೆ ಒಮ್ಮತ ಇಲ್ಲದಿದ್ದರೂ ನಿಮ್ಮ ನಿಲುವು ಬದಲಿಸುವ ಸ್ಥಿತಿಯಲ್ಲಿ ಇರುವುದಿಲ್ಲ. ಹೋಟೆಲ್ ನಲ್ಲಿ ಕೆಲಸ ಮಾಡುವವರಿಗೆ ಒತ್ತಡದ ದಿನ ಇದಾಗಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಭವಿಷ್ಯದಲ್ಲಿ ಆಗಬಹುದಾದ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ದೊರೆಯುತ್ತಾ ಸಾಗುತ್ತದೆ. ನಿಮಗೆ ದೊಡ್ಡ ಹುದ್ದೆಯೊಂದರ ಜವಾಬ್ದಾರಿ ನೀಡುವ ಕುರಿತು ಮೇಲಧಿಕಾರಿಗಳು ಸುಳಿವು ಕೊಡಲಿದ್ದಾರೆ. ಈ ಹಿಂದೆ ನಿಮ್ಮ ಆದಂಥ ಸಹಾಯವನ್ನು ನೆನಪಿನಲ್ಲಿ ಇಟ್ಟುಕೊಂಡು, ಸ್ನೇಹಿತರು ಈಗ ನಿಮ್ಮ ಅಗತ್ಯಕ್ಕೆ ಸ್ಪಂದಿಸುತ್ತಾರೆ. ಬ್ಯಾಂಕ್ ನಲ್ಲಿ ಲಾಕರ್ ಅನ್ನು ಪಡೆದುಕೊಳ್ಳುವುದಕ್ಕೆ ನಿಮ್ಮಲ್ಲಿ ಕೆಲವು ಪ್ರಯತ್ನಗಳನ್ನು ಮಾಡಲಾಗಿದೆ. ಅಥವಾ ಮನೆಗೆ ಅಂಥ ಲಾಕರ್ ಖರೀದಿಸಿ ತರುವಂಥ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.



Source link

Leave a Reply

Your email address will not be published. Required fields are marked *