
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):
ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟವಾಗುತ್ತದೆ ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಿದೆ. ಇಷ್ಟು ಸಮಯ ನಿಮ್ಮನ್ನು ಬೇಕಂತಲೇ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿರುವವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಿದ್ದಾರೆ. ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಪ್ರಮುಖವಾದ ಪ್ರಾಜೆಕ್ಟ್ ಒಂದನ್ನು ನಿಮಗೆ ವಹಿಸುವ ಸಾಧ್ಯತೆಯೂ ಇದೆ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):
ಏಕಾಂಗಿತನ ಈ ದಿನ ನಿಮ್ಮನ್ನು ಕಾಡಲಿದೆ. ಕುಟುಂಬದ ಸದಸ್ಯರು, ಸ್ನೇಹಿತರು, ಕೊನೆಗೆ ಸಹೋದ್ಯೋಗಿಗಳು ಸಹ ತಂತಮ್ಮ ಕೆಲಸದಲ್ಲಿ ಮುಳುಗಿ ಹೋಗುವುದರಿಂದ ಇಂಥದ್ದೊಂದು ಭಾವನೆ ನಿಮ್ಮಲ್ಲಿ ಹುಟ್ಟಿಕೊಳ್ಳಲಿದೆ. ಉದ್ಯೋಗ, ವೃತ್ತಿ- ವ್ಯಾಪಾರ ಹೀಗೆ ಯಾವುದೇ ವಿಚಾರದಲ್ಲಿ ಆಗಿರಲಿ, ಭೇಟಿ ಆಗಬೇಕು ಎಂದು ಸಮಯ ಕೇಳಿ, ಅದರ ಅಗತ್ಯವನ್ನು ಒತ್ತಿ ಹೇಳಿದ ನಂತರವೂ ಕೊನೆ ಕ್ಷಣದಲ್ಲಿ ನಿಮ್ಮನ್ನು ಇವತ್ತು ಕಾಣಲು ಆಗಲ್ಲ ಎಂದು ವ್ಯಕ್ತಿಯೊಬ್ಬರು ಹೇಳಲಿದ್ದಾರೆ. ಇದರಿಂದ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಕುಗ್ಗುವಂತೆ ಆಗಲಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):
ಆಗಲಿ, ಮಾಡಿಕೊಡುತ್ತೇನೆ ಎಂದು ನೀವಾಗಿಯೇ ಭರವಸೆ ನೀಡಿದ್ದ ಕೆಲವು ಕಾರ್ಯಗಳನ್ನು ಅಂದುಕೊಂಡ ಸಮಯದಲ್ಲಿ ಪೂರ್ಣಗೊಳ್ಳುವುದು ಅಸಾಧ್ಯ ಎಂಬುದು ಖಚಿತವಾಗುತ್ತದೆ. ಆದರೆ ಈ ವಿಚಾರವನ್ನು ಹೇಗೆ ಹೇಳುವುದು ಎಂಬುದು ಇಕ್ಕಟ್ಟಿಗೆ ಸಿಲುಕಲಿದೆ. ಆರ್ಥಿಕ ವಿಚಾರಗಳಿಗೆ ಅಭದ್ರತೆ ಭಾವವೊಂದು ನಿಮ್ಮನ್ನು ಮುತ್ತಿಕೊಳ್ಳಲಿದೆ. ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮೊದಲು ಒಂದಕ್ಕೆ ನಾಲ್ಕು ಬಾರಿ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು.
ಲೇಖನ- ಸ್ವಾತಿ ಎನ್.ಕೆ.