ಭಾರತ ಮತ್ತು ಸೌತ್ ಆಫ್ರಿಕಾ (ಭಾರತ vs ದಕ್ಷಿಣ ಆಫ್ರಿಕಾ) ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಮೂರು ಪಂದ್ಯಗಳ ಏಕದಿನ ಸರಣಿ ಆರಂಭ. ನವೆಂಬರ್ 30 ರಿಂದ ಆರಂಭವಾಗಿದೆ ಈ ಸರಣಿಯ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.
ಭಾರತ ತಂಡದ ಪ್ರಮುಖ ವೇಗಿ ಜಪ್ರೀತ್ ಬುಮ್ರಾ ಏಕದಿನ ಸರಣಿ ವೇಳೆ ಅವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ. ಮುಂಬರುವ ಟಿ20 ರಿಂದ ಗಮನದಲ್ಲಿರಿಸಿ ಬುಮ್ರಾ ಅವರಿಗೆ ಸೌತ್ ಆಫ್ರಿಕಾ ವಿರುದ್ಧ ಏಕದಿನ ಸರಣಿಯಿಂದ ಹೊರಗಿಡಲು ಮುಂದಾಗಿದೆ.
ಅದೇ ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಏಷ್ಯಾಕಪ್ ವೇಳೆ ಕಾಣಿಸಿಕೊಂಡಿದ್ದ ಪಾಂಡ್ಯ ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ. ಇದಾಗ್ಯೂ ಟಿ20 ಔಟ್ ಅನ್ನು ಗಮನದಲ್ಲಿಟ್ಟುಕೊಂಡು ಹಾರ್ದಿಕ್ ಪಾಂಡ್ಯ ಅವರಿಗೆ ಹೆಚ್ಚಿನ ವಿಶ್ರಾಂತಿ ನೀಡಲು ಬಿಸಿ ಸಿದ್ಧತೆಗೆ ಮುಂದಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಿದೆ. ಮೊದಲ ಪಂದ್ಯವು ರಾಂಚಿಯಲ್ಲಿ ನಡೆದರೆ, ದ್ವಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯಪುರದಲ್ಲಿ ನಡೆಯಿತು. ಇನ್ನು ಮೂರನೇ ಏಕದಿನ ಪಂದ್ಯವು ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.
ಭಾರತ ಏಕದಿನ ತಂಡ(ಸಂಭವ್ಯ) : ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್, ಶಿವ್ ಜುರೆಲ್.




