Headlines

ವಿರೋಧಿಗಳಿಗೆ ಜಿ.ಟಿ. ದೇವೇಗೌಡ ಟಕ್ಕರ್​​: JDSನಿಂದ ಹೊರ ಬರ್ತಾರಾ ಹಾಲಿ ಶಾಸಕ?

ವಿರೋಧಿಗಳಿಗೆ ಜಿ.ಟಿ. ದೇವೇಗೌಡ ಟಕ್ಕರ್​​: JDSನಿಂದ ಹೊರ ಬರ್ತಾರಾ ಹಾಲಿ ಶಾಸಕ?


ಮೈಸೂರು, ಜನವರಿ 19: ರಾಜ್ಯದಲ್ಲಿ ಮುಂಬರಲಿರುವ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ನಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ. ಮಹೇಶ್ ಸ್ಪರ್ಧೆ ಮಾಡ್ತಾರೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು. ಆ ಮೂಲಕ ಪಕ್ಷದಿಂದ ಕಾಯ್ದುಕೊಂಡಿರುವ ಹಾಲಿ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಕ್ ಕೊಡಲು ದಳಪತಿಗಳು ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದೆ ವಿಚಾರವಾಕ್ಕೀಗ ವಸ್ತು ಜಿಟಿಡಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಜಿ.ಟಿ. ದೇವೇಗೌಡರು ಹೇಳಿದ್ದೇನು?

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷ ಇದ್ದು, ನಮ್ಮ ಪಕ್ಷದ ಕಾರ್ಯಕರ್ತರಿಗೆ ಯಾವುದೇ ಆತಂಕ ಬೇಡ. ಚುನಾವಣೆ ಬಂದಾಗ ಬೇರೆ ವಿಚಾರದ ಬಗ್ಗೆ ಚರ್ಚೆ ಮಾಡೋಣ. ಈಗ ಜೆಡಿಎಸ್ ನಲ್ಲಿ ಇದ್ದೇನೆ, ಜೆಡಿಎಸ್ ನಿಂದ ಒಂದು ಹೆಜ್ಜೆ ತೆಗೆದಿಲ್ಲ. ಕೆಲ ವಿಚಾರದಲ್ಲಿ ನೋವಾಗಿದೆ, ಅದು ನಾಯಕರಿಗೂ ಗೊತ್ತಿದೆ. ಹಾಗಂತ ನನಗೆ ನೋವಾಗಿದೆ ಅಂತಾ ಪಕ್ಷದಿಂದ ಹೊರ ಹೋಗಿಲ್ಲ. ಜೆಡಿಎಸ್ ವಿರುದ್ಧವಾಗಿ ನಾನು ಯಾವತ್ತೂ ಮಾತನಾಡಿಲ್ಲ. ಒಳ್ಳೆಯ ಸಮಯ ಬರುತ್ತದೆ, ಎಲ್ಲವೂ ಒಳ್ಳೆಯದಾಗುತ್ತೆ. ಕಾಲ ಕಳೆದಂತೆ ಎಲ್ಲಾ ಮುನಿಸು ನೋವು ಮಾಯವಾಗುತ್ತೆ ಎಂದು ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಇದನ್ನೂ ಓದಿ: ಜಿ.ಟಿ. ದೇವೇಗೌಡರಿಗೆ ಭರ್ಜರಿ ಶಾಕ್ ಕೊಡುತ್ತಾ ಜೆಡಿಎಸ್ ? ವರಿಷ್ಠರ ನಡೆಯೇನು?

ತಮ್ಮಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ವಿಚಾರ ಸಂಬಂಧವೂ ಮಾತನಾಡಿರುವ ಅವರು, ಯಾರಿಗೂ ದ್ರೋಹ ಮಾಡುವ ಬುದ್ಧಿ ನನಗಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ಗೆ ಹೋದ ಮೇಲೆ ಜೆಡಿಎಸ್ ಕಟ್ಟಿದ್ದೇನೆ. ಹೆಚ್.ಡಿ. ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಜೊತೆಗೆ ಒಟ್ಟಾಗಿ ಇದ್ದೇನೆ. ಸಿಎಂ ಕುಮಾರಸ್ವಾಮಿ ಆಗಬೇಕೆಂದು ಪಕ್ಷ ಕಟ್ಟಿದ್ದೇನೆ. ಜೆಡಿಎಸ್ ನಲ್ಲಿ ಗಟ್ಟಿಯಾಗಿ ಇದ್ದೇನೆ, ಜೆಡಿಎಸ್ ನಲ್ಲೇ ಇರುತ್ತೇನೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕೆಲಸ ಜಾಸ್ತಿ ಇದೆ ಎಂದವರು ಹೇಳಿದ್ದಾರೆ.

ಜಿಟಿಡಿ ಮೇಲೆ ಮುಖಂಡರ ಮುನಿಸೇಕೆ?

ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡ ಪಕ್ಷಕ್ಕೆ ಮೋಸ ಮಾಡಿದ್ದಾರೆ . MLC ಚುನಾವಣೆಯಲ್ಲೂ ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ ಎಂಬುದು ಜೆಡಿಎಸ್ ಮುಖಂಡರ ಪ್ರಮುಖ ಆರೋಪ. ಜೊತೆಗೆ ಜೆಡಿಎಸ್‌ನವರು ಪದೇ ಪದೇ ಜಿಟಿ ಸಿದ್ದರಾಮಯ್ಯ ಸೇರಿದಂತೆ ನಾಯಕರನ್ನು ಹೊಗಳುತ್ತಿದ್ದದ್ದು ಪಕ್ಷಕ್ಕೆ ಮುಜುಗರವನ್ನೂ ತಂದಿದೆ ಎಂಬುದು ಕೆಲ ನಾಯಕರ ಅಭಿಪ್ರಾಯ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *