ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ


ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿ, ಮಾರ್ಚ್ 19: ರಾಜ್ಯದಲ್ಲಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಬಡವರು ಹಸಿದ ಹೊಟ್ಟೆಯಲ್ಲಿ ಮಲಗಬಾರದು ಅಂತಾ ಸರ್ಕಾರ ಅನ್ನಭಾಗ್ಯ ಯೋಜನೆ (ಅನ್ನ ಭಾಗ್ಯ ಅಕ್ಕಿ) ಮೂಲಕ ಬಡವರಿಗೆ ಅಕ್ಕಿ ನೀಡುತ್ತಿದೆ. ಆದರೆ ಬಡವರ ಹೊಟ್ಟೆ ಸೇರಬೇಕಾದ ಅಕ್ಕಿಯನ್ನ ರೇಷನ್ ಅಂಗಡಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ರಾತ್ರೋರಾತ್ರಿ ಅಕ್ಕಿ ಸಪ್ಲೈ ಮಾಡುತ್ತಿರುವ ದೃಶ್ಯ ಸಿಟಿವಿಯಲ್ಲಿ ಸೆರೆಯಾಗಿದ್ದು, ಕಳ್ಳಾಟ ಬಯಲಾಗಿದೆ.

ಕಲಬುರಗಿ ನಗರದ ಜೆ.ಆರ್ ನಗರದಲ್ಲಿರುವ ರೇಷನ್ ಅಂಗಡಿಯಿಂದ ಮಾರ್ಚ್ 3 ರಂದು ಅಕ್ಕಿಯನ್ನ ರಾತ್ರಿ ಬೇರೆಡೆ ಸಪ್ಲೈ ಮಾಡಲಾಗಿದೆ. ಸರ್ಕಾರ ಅನ್ನಭಾಗ್ಯ ಯೋಜನೆ ಮೂಲಕ ಬಡವರಿಗೆ ಉಚಿತ ಅಕ್ಕಿ ನೀಡುತ್ತಿದೆ. ಆದರೆ ರೇಷನ್ ಅಂಗಡಿಗಳು ಬಡವರಿಗೆ ನೀಡಬೇಕಾದ ಅಕ್ಕಿಯನ್ನ ಜನರಿಗೆ ನೀಡುವ ಬದಲು ಕಾಳಸಂತೆಯಲ್ಲಿ ಎಗ್ಗಿಲ್ಲದೆ ಮಾರಾಟಕ್ಕೆ ಮುಂದಾಗಿದ್ದಾರೆ.

ಹೋರಾಟದ ಎಚ್ಚರಿಕೆ

ಕೆಲವು ಪಡಿತರ ಚೀಟಿದಾರರಿಗೆ ಪುಡಿಗಾಸಿನ ಆಸೆ ತೋರಿಸಿ ದುಡ್ಡು ಕೊಡುತ್ತಿದ್ದಾರೆ. ಇನ್ನು ಕೆಲವರ ಥಂಬ್ ಹಾಗೆ ಅಕ್ಕಿ ಇಲ್ಲ, ಮುಂದಿನ ತಿಂಗಳು ಕೊಡುತ್ತೇವೆ ಅಂತಾ ಹೇಳಿ ವಾಪಸ್ ಕಳುಹಿಸುತ್ತಿದ್ದಾ. ಆ ಮೂಲಕ ಇವರೆಲ್ಲರ ಪಾಲಿನ ಅಕ್ಕಿಯನ್ನ ಮಹಾರಾಷ್ಟ್ರ, ತೆಲಂಗಾಣಕ್ಕೆ ಸಪ್ಲೈ ಮಾಡೋದಕ್ಕೆ ಮುಂದಾಗಿದ್ದಾರೆ. ಬಡವರ ಪಾಲಿನ ಅಕ್ಕಿಯನ್ನ ಕಾಳಸಂತೆಯಲ್ಲಿ ಮಾರಾಟ ದಂಧೆಗೆ ಬ್ರೇಕ್ ಹಾಕದೆ ಹೋದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಹೋರಾಟಗಾರ ಎಂಎಸ್ ಪಾಟೀಲ್ ನರಿಬೋಳ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬ್ರೇಕ್: ಉದ್ಯಮಿಗಳು ಕಂಗಾಲು

ಜೆ.ಆರ್ ನಗರದಲ್ಲಿರುವ ರೇಷನ್ ಅಂಗಡಿಯ ಪಡಿತರದಾರರಿಗೆ ತಿಂಗಳಿಗೆ ಸರಿಯಾಗಿ ರೇಷನ್ ವಿತರಿಸುವುದಿಲ್ಲ. ಯಾರಾದರು ಜೋರು ಮಾಡಿ ಕೇಳಿದ್ರೆ ರೇಷನ್ ಕಾರ್ಡ್ ಕಟ್ ಮಾಡಿಸುವ ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪಗಳು ಕೂಡ ಕೇಳಿಬಂದಿವೆ. ಜನರ ಪಾಲಿನ ಅಕ್ಕಿಯನ್ನ ಬೇರೆಡೆ ಮಾರಾಟ ಮಾಡಿ ರೇಷನ್ ಅಂಗಡಿಯವರು ದುಪ್ಪಟ್ಟು ಹಣ ಮಾಡಿಕೊಳ್ಳಲು ಮುಂದಾಗಿದ್ದಾರೆ.

ರೇಷನ್ ಅಂಗಡಿ ಕಥೆಯೇ ಬೇರೆ

ಇನ್ನು ರೇಷನ್ ಅಂಗಡಿಯಿಂದ ಅಕ್ಕಿ ಸಪ್ಲೈ ಮಾಡಿರುವ ವಿಚಾರಕ್ಕೆ ರೇಷನ್ ಅಂಗಡಿಯ ಮಾಲೀಕನಿಗೆ ಕೇಳಿದರೆ ಅವರು ಹೇಳುವ ಕಥೆಯೇ ಬೇರೆ. ನಾಲ್ಕೈದು ಕುಟುಂಬದ ಪಡಿತರದಾರ ಅಕ್ಕಿಯನ್ನ ತೆಗೆದುಕೊಂಡು ಹೋಗಿ ಗಾಡಿಯಲ್ಲಿ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ. ಅವರು ಅಕ್ಕಿ ತೆಗೆದುಕೊಂಡು ಹೋಗುವ ವಿಡಿಯೋವನ್ನ ಯಾರೋ ಬೇಕು ಅಂತಾ ವೈರಲ್ ಮಾಡಿದ್ದಾರೆ. ಅದರ ಹೊರತಾಗಿ ಯಾವುದೇ ರೀತಿಯಲ್ಲಿ ಅಕ್ರಮವಾಗಿ ಅಕ್ಕಿ ಸಪ್ಲೈ ಮಾಡಿಲ್ಲ ಎಂದು ರೇಷನ್ ಅಂಗಡಿ ಮಾಲೀಕ ಭಾಗ್ಯವಂತ ಪಾಟೀಲ್ ಹೇಳಿದ್ದಾರೆ.

ಆದರೆ ಹಗಲು ಹೊತ್ತಿನಲ್ಲಿ ಸರಿಯಾಗಿ ಪಡಿತರ ವಿತರಿಸಿದ ರೇಷನ್ ಅಂಗಡಿ ಯಾರೋ ನಾಲ್ಕೈದು ಜನರ ರೇಷನ್ ಗಾಗಿ ರಾತ್ರಿ ಅಂಗಡಿ ಓಪನ್ ಮಾಡಿ ರೇಷನ್ ನೀಡುತ್ತಾರಾ ಅನ್ನೋದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ: ಯುದ್ಧದ ಪರಿಣಾಮ ಯಾದಗಿರಿಯ 28 ರೈಸ್ ಮಿಲ್‌ಗಳಿಗೆ ಭಾರೀ ಹೊಡೆತ!

ಕಲಬುರಗಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಬಿಂದಾಸ್ ಆಗಿ ಅಕ್ರಮವಾಗಿ ಅಕ್ಕಿ ಸಾಗಾಟ, ಮಾರಾಟದ ದಂಧೆ ಜೊತೆಗೆ ರೇಷನ್ ಅಂಗಡಿಯಿಂದ ಅಕ್ಕಿ ಸಪ್ಲೈ ಜೊತೆಗೆ ರೆಷನ್ ಅಂಗಡಿಯಲ್ಲಿ ಅಕ್ಕಿಯ ಬದಲು ಪಡಿತರ ಚೀಟಿದಾರರಿಗೆ ಹಣ ನೀಡುವಂತಹ ದಂಧೆ ನಿರಂತರವಾಗಿ ನಡೆಯುತ್ತಿದ್ದ ಅಧಿಕಾರಿಗಳು ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ನಿಜಕ್ಕೂ ದುರಂತವೇ ಸರಿ. ಇನ್ನು ಮುಂದಾದರು ಬಡವರ ಪಾಲಿನ ಅಕ್ಕಿಯನ್ನ ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲಕ್ಕೆ ಬ್ರೇಕ್ ಹಾಕುವಂಥ ಕೆಲಸಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *