ಕಲಬುರಗಿ, ಮಾರ್ಚ್ 05: ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಬುರ್ಖಾ ಹಾಕಿಕೊಂಡು ಬಣ್ಣ ಹಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ವ್ಯಕ್ತಿಗೆ ಬುರ್ಖಾ ಹಾಕಿ ಬಣ್ಣ ಹಚ್ಚಿದ್ದಾರೆ. ಆ ಮೂಲಕ ಹಿಂದೂ ಯುವಕರು ಬುರ್ಖಾಗೆ ಅವಮಾನ ಮಾಡಿದ್ದಾರೆಂದು ದಲಿತ ಸೇನೆಯ ಮುಖಂಡ ಸಮೀರ್ ಆವಂಟಿ ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಎನ್ ಎಸ್ ಕಾಯ್ದೆ 2003ರ ಸೆಕ್ಷನ್ 196 ಹಾಗೂ 299 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.