
ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (ಮಲ್ಲಿಕಾರ್ಜುನ ಮುತ್ಯಾ) ವಿರುದ್ಧ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ ಅರ್ಜಿ ಸಲ್ಲಿಸಿದ್ದರು. ಇದರ ಕಲಬುರಗಿ ವಿಚಾರಣೆ ನಡೆಸುತ್ತಿರುವ ಪೀಠ (ಕಲಬುರಗಿ ಹೈಕೋರ್ಟ್ ಪೀಠ) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಬಾಲಕಿ ಜತೆ ಅನುಚಿತವಾಗಿ ನಡೆದ ಆರೋಪದ ಮೇಲೆ ಕಳೆದ ಫೆ.25ರಂದು ಶಹಾಪುರ ಸಿಡಿಪಿಯೋ ನೀಡಿದ ದೂರಿನನ್ವಯ ಗೋಗಿ ಪೊಲೀಸ್ ಠಾಣೆಯಲ್ಲಿ ಮುತ್ಯಾ ಪ್ರಕರಣ ದಾಖಲಾಗಿದ್ದು, ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಮೊದಲು ವಿಚಾರಣೆ ನಡೆಸಿದ್ದು, ಮುತ್ಯಾಗೆ ನಾಲ್ಕು ಮೊಬೈಲ್ ಫೋನ್‌ಗಳನ್ನು ಸಹ ತನಿಖಾಧಿಕಾರಿ ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ, ಇದೀಗ ಕೋರ್ಟ್, ತನಿಖೆಗೆ ಮಧ್ಯಂತರ ತಡೆ ನೀಡಿದ್ದು, ಮುತ್ಯಾಗೆ ಕೊಂಚ ನಿರಾಳವಾಗಿದೆ.
ಇದನ್ನೂ ಓದಿ: ಪೋಕ್ಸೋ ಪ್ರಕರಣ: ಮಲ್ಲಿಕಾರ್ಜು ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್
ಜಾಮೀನು ನಿರಾಕರಿಸಿದ್ದ ಕೋರ್ಟ್
ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ (ಮಲ್ಲಿಕಾರ್ಜುನ್ ಮುತ್ಯಾ) ನಿರೀಕ್ಷಣಾ ಜಾಮೀನು ಅರ್ಜಿ (ಬಾಡಿಲ್ ಮನವಿ) ವಜಾಗೊಂಡಿದೆ. ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ್ದ ಯಾದಗಿರಿ (ಯಾದಗಿರಿ) ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಮಾರ್ಚ್ 09 ರಂದು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಿಂದ ಮುತ್ಯಾಗೆ ಬಂಧನ ಭೀತಿ ಎದುರಾಗಿತ್ತು.
ಏನಿದು ಪ್ರಕರಣ?
ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ರಾಜ್ಯಾದ್ಯಂತ ಭಾರೀ ವೈರಲ್ ಆಗಿದೆ. ಇದರ ಬೆನ್ನಲ್ಲೇ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಯಾದಗಿರಿ ಜಿಲ್ಲಾಧಿಕಾರಿ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಇದರಲ್ಲೇ ಡಿಸಿ ಸೂಚನೆ ಫೆಬ್ರವರಿ 25 ರಂದು ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಮುತ್ಯಾ ನಾಪತ್ತೆಯಾಗಿತ್ತು. ಇನ್ನೊಂದೆಡೆ ಅವರ ಭಕ್ತರು ಹಾಗೂ ಕೋಲಿ ಸಮಾಜದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಮುತ್ಯಾರ ಫೋಕ್ಸೋ ಪ್ರಕರಣವನ್ನು ರದ್ದುಗೊಳಿಸಿದ್ದರು.
ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.