Headlines

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ವಿಡಿಯೋ ವೈರಲ್​​

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ವಿಡಿಯೋ ವೈರಲ್​​


ಕಲಬುರಗಿ, ಫೆಬ್ರವರಿ 22: ಬಾಗಲಕೋಟೆಯಲ್ಲಿ (ಬಾಗಲಕೋಟೆ) ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಗಲಾಟೆ ಮಾಸುವ ಮುನ್ನವೇ ನಿನ್ನೆ ಕಲಬುರಗಿಯಲ್ಲೂ (ಕಲಬುರಗಿ) ಅಂತಹದೊಂದು ಗಲಾಟೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಕೂಡ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಕೋಮುಗಳ ಮಧ್ಯೆ ಸಂಘರ್ಷ ನಡೆದಿದ್ದು, ಅಕ್ಷರಶಃ ಗ್ರಾಮ ಬೂದಿ ಮುಚ್ಚಿದ ಕೆಂಡವಾಗಿದೆ. ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಗಣೇಶ ಕಟ್ಟೆಯಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಗಲಾಟೆ ನಡೆಯಿತು. ಎರಡು ಸಮುದಾಯಗಳ ನಡುವೆ ಮಾರಾಮಾರಿ ವೇಳೆ ಮಕ್ಕಳ ಕಲ್ಲಿನಿಂದ ಹಲ್ಲೆ ಮಾಡಿರುವ ಮತ್ತೊಂದು ವಿಡಿಯೋ ಇದೀಗ ಲಭ್ಯವಾಗಿದೆ. ಮನೆಯ ಮಾಳಿಗೆ ಮೇಲೆ ಬಾಲಕನೊಬ್ಬ ಕೈಯಲ್ಲಿ ಕಲ್ಲು ಹಿಡಿದು ನಿಂತಿರುವ ವಿಡಿಯೋ ಸದ್ಯ ವೈರಲ್ ಆಗಿದೆ.

ಘಟನೆ ಹಿನ್ನಲೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಎರಡು ಕೋಮುಗಳ ಮಧ್ಯೆ ಗಲಾಟೆಯಾಗಿದೆ. ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಮೆರವಣಿಗೆ ವೇಳೆ ರಾವೂರ್ ಗ್ರಾಮದ ಗಣೇಶ ಕಟ್ಟೆ ಬಳಿ ಡಿಜೆ ಸೌಂಡ್‌ಗೆ ಬನಾಯೇಂಗೆ ಮಂದಿರ ಹಾಡಿಗೆ ಹಿಂದೂ ಕಾರ್ಯಕರ್ತರು ಭರ್ಜರಿಯಾಗಿ ಡ್ಯಾನ್ಸ್ ಮಾಡುತ್ತಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಮುಸ್ಲಿಮರು ಕಿರಿಕ್ ಮಾಡಿದ್ದಾರೆ. ಸೌಂಡ್ ಕಡಿಮೆ ಮಾಡಿ ಅಂತಾ ಹೇಳಿದ್ದೆ ತಡ ಎರಡು ಸಮುದಾಯದ ಮಧ್ಯೆ ಗಲಾಟೆ ಆರಂಭವಾಗಿದೆ. ಈ ವೇಳೆ, ಕಲ್ಲಿನಿಂದ ಹೊಡೆದಾಟ ಶುರುವಾಗಿದ್ದು, ನಾಲ್ಕೈದು ಜನರಿಗೆ ಗಾಯವಾಗಿದೆ.

ಇದನ್ನೂ ಓದಿ: ಕಲ್ಲು ತೂರಾಟ ಕೇಸ್: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ

ಈ ಪ್ರಕರಣಕ್ಕೆ ಪ್ರತಿ ಸಮುದಾಯದವರಿಂದ ದೂರು, ದಾಖಲಾದ ಹಿನ್ನಲೆಯಲ್ಲಿ ವಾಡಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ತಿರುಮಲೇಶ್ ಅವರು ಸುಮೋಟೋ ಕೇಸ್ ದಾಖಲಾತಿ ಹೊಂದಿದ್ದಾರೆ. ಬಿಎನ್‌ಎಸ್ 126 ಕಾಯ್ದೆಯಡಿ 8 ಜನರ ವಿರುದ್ಧ ಕೇಸ್ ದಾಖಲಾಗಿದೆ.

ಈ ಬಗ್ಗೆ ಎಸ್ಪಿ ಅಡ್ಡೂರು ಶ್ರೀನಿವಾಸಲು ಹೇಳಿಕೆ ನೀಡಿದ್ದು, ಶಿವಾಜಿ ಜಯಂತ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಎರಡು ಕೋಮುಗಳ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ವ್ಯಕ್ತಿಗೆ ಗಾಯವಾಗಿದ್ದು, ಘಟನೆಯಲ್ಲಿ ಎರಡು ಕೋಮುಗಳಿಂದ ದೂರು, ಪ್ರತಿದೂರು ದಾಖಲಾಗಿರುವ ಹಿನ್ನಲೆಯಲ್ಲಿ ವಾಡಿ ಪೊಲೀಸ್ ಠಾಣೆಯಿಂದ ಎರಡು ಕೋಮಿನ 8 ಜನರ ವಿರುದ್ಧ ಪ್ರಕರಣ ದಾಖಲಿಸಿರುವ ಮಾಹಿತಿ.

ಇದನ್ನೂ ಓದಿ: ಮುಸ್ಲಿಮರ ಪ್ರಾರ್ಥನೆಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ

ಸದ್ಯ ರಾವೂರ್ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ಬಗ್ಗೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗಳು ನಡೆದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 3:14 pm, ಭಾನುವಾರ, 22 ಫೆಬ್ರವರಿ 26



Source link

Leave a Reply

Your email address will not be published. Required fields are marked *