ಮಂಗಳೂರು, ಡಿಸೆಂಬರ್ 09: ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಕಂಡುಬಂದಿವೆ, ಟಾರ್ಗೆಟ್ 900, ಟೀಮ್ ಟಾರ್ಗೆಟ್ ಬಾಯ್ಸ್, ಇಮ್ಮು ಬಾಯಿ ಇನ್ಸ್ಟಾಗ್ರಾಮ್ ಪೇಜ್‌ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್‌ಡೇಲ್‌ಗೆ ಈ ಮೂಲಕ ಎಚ್ಚರಿಕೆ ನೀಡಲಾಗಿದೆ.
16 ಇನ್ಸ್ಟಾಗ್ರಾಮ್ ಖಾತೆಗಳ ಮೇಲೆ ಎಫ್ಐಆರ್
Revange Is Loading , Target set One By One ಎಂಬ ಸಂದೇಶ ಇರುವ ಪೋಸ್ಟ್ ಮಾಡಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ ಎಚ್ಚರಿಕೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್ ಪೋಸ್ಟ್ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್ ಐಆರ್ ಮಾಡಿದೆ. ಜೊತೆಗೆ ಆಯಕಟ್ಟಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲು, ನ್ಯಾಟೋರಿಯಸ್ ಗ್ಯಾಂಗ್‌ಗಳ ಚಲನವಲನಗಳನ್ನು ಗಮನಿಸಲಾಗುತ್ತಿದೆ.
ಇದನ್ನೂ ಓದಿ: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿ ಭರತ್ ಕುಮ್ಡೇಲು ಶರಣಾಗತಿ
ಈ ಹಿಂದೆಯೂ ಭಾರತ್ ಕುಮ್ಡೇಲ್‌ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್‌ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್ ಕುಮ್ಡೇಲ್ ರಕ್ತ ಈ ಭೂಮಿಗೆ ಹರಿಸಿದರೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿ ಮರೆತಿಲ್ಲ, ಪ್ರತಿರೋಧವಲ್ಲ ಎಂದು ಪೋಸ್ಟ್ ಮಾಡಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.