Kaliganj Bomb Blast:ಬಂಗಾಳ ಉಪಚುನಾವಣೆ ಮತ ಎಣಿಕೆ ವೇಳೆ ಬಾಂಬ್ ಸ್ಪೋಟ: 9 ವರ್ಷದ ಬಾಲಕಿ ಸಾವು | Bomb Blast During By Election Vote Counting Girl Died Kaliganj By Poll Result

Kaliganj Bomb Blast:ಬಂಗಾಳ ಉಪಚುನಾವಣೆ ಮತ ಎಣಿಕೆ ವೇಳೆ ಬಾಂಬ್ ಸ್ಪೋಟ: 9 ವರ್ಷದ ಬಾಲಕಿ ಸಾವು | Bomb Blast During By Election Vote Counting Girl Died Kaliganj By Poll Result



West Bengal By Election: ಪಶ್ಚಿಮ ಬಂಗಾಳದಲ್ಲಿ ಉಪಚುನಾವಣಾ ಮತ ಎಣಿಕೆ ವೇಳೆ ಬಾಂಬ್ ಸ್ಫೋಟ ಸಂಭವಿಸಿ 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. 

West Bengal By Election: ಪಶ್ಚಿಮ ಬಂಗಾಳದಲ್ಲಿ ಉಪ ಚುನಾವಣೆಯ ಮತ ಎಣಿಕೆ ವೇಳೆ ಬಾಂಬ್ ಸ್ಫೋಟಗೊಂಡಿದ್ದು, 9 ವರ್ಷದ ಬಾಲಕಿಯೊಬ್ಬಳು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಕಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ( Kaliganj Assembly Constituency) ನಡೆದ ಉಪಚುನಾವಣೆಯ (By Election result) ಮತ ಎಣಿಕೆ ವೇಳೆ ಈ ದುರಂತ ನಡೆದಿದೆ.

ಕಾಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬರೋಚಾಂದ್‌ಗರ್‌ ಪ್ರದೇಶದಲ್ಲಿ ಘಟನೆ ನಡೆದಿದ್ದು, ಈ ಸ್ಫೋಟದಲ್ಲಿ (kaliganj bomb blast)ಬಾಲಕಿ ಗಂಭೀರ ಗಾಯಗೊಂಡಿದ್ದಳು. ಉಪಚುನಾವಣೆಯ (By Election) ಮತ ಎಣಿಕೆ ಕಾರ್ಯ ನಡೆಯುತ್ತಿದ್ದಾಗಲೇ ಈ ದುರಂತ ಸಂಭವಿಸಿದೆ. ಈ ಘಟನೆಗೆ ಕಾರಣವಾದವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ(CM Mamata Benerjee) ಹೇಳಿದ್ದಾರೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ:

ಕೃಷ್ಣನಗರ ಜಿಲ್ಲೆ ವ್ಯಾಪ್ತಿಗೆ ಬರುವ ಬರೋಚಾಂದ್‌ಗರ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ(Bomb Blast) ಪುಟ್ಟ ಬಾಲಕಿ ಜೀವ ಕಳೆದುಕೊಂಡ ವಿಚಾರ ತಿಳಿದು ಬಹಳ ನೋವಾಗಿದೆ. ಈ ನೋವಿನ ಸಮಯದಲ್ಲಿ ಬಾಲಕಿ ಕುಟುಂಬದ ಪರವಾಗಿ ನನ್ನ ಪ್ರಾರ್ಥನೆ ಹಾಗೂ ಸಂತಾಪಗಳು, ಈ ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಸ್ಫೋಟಕ್ಕೆ ಏನು ಕಾರಣ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

 

Scroll to load tweet…

 



Source link

Leave a Reply

Your email address will not be published. Required fields are marked *