Headlines

ಕೋಮುದ್ವೇಷದ ಭಾಷಣ: ಕಲ್ಲಡ್ಕ ಪ್ರಭಾಕರ್​​​ ಭಟ್ ಮೇಲೆ ಮತ್ತೆ ಎಫ್​​ಐಆರ್ ದಾಖಲು

ಕೋಮುದ್ವೇಷದ ಭಾಷಣ: ಕಲ್ಲಡ್ಕ ಪ್ರಭಾಕರ್​​​ ಭಟ್ ಮೇಲೆ ಮತ್ತೆ ಎಫ್​​ಐಆರ್ ದಾಖಲು


ಮಂಗಳೂರು, ಜ.22: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (ಕಲ್ಲಡ್ಕ ಪ್ರಭಾಕರ್ ಭಟ್) ವಿರುದ್ಧ ಎಫ್ ಐಆರ್ ಪತ್ತೆ ಹಚ್ಚಲಾಗಿದೆ. ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲು ಮಾಡಲಾಗಿದೆ. ಪುತ್ತೂರಿನ ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಪುತ್ತೂರು ನಿವಾಸಿ ರಾಮಚಂದ್ರ ಕೆ. ಎಂಬುವವರು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ.

ಇದರೊಂದಿಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಈ ಭಾಷಣವನ್ನು ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ ಚಾನೆಲ್ ಹಾಗೂ ಆಯೋಜಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಜನವರಿ 12 ರಂದು ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ಕೋಮುದ್ವೇಷದ ವಿಚಾರಗಳು ಇತ್ತು ಎಂದು ಹೇಳಲಾಗಿದೆ. ಅವರು ವಿದ್ಯಾರ್ಥಿಗಳು ಮತ್ತು ಪೋಷಕರ ಎದುರು ವಿವಾದಾತ್ಮಕ ಮಾತುಗಳನ್ನು ಆಡಿದ್ದಾರೆ ಎಂದು ಹೇಳಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ವಿವಿಧ ಗಂಭೀರ ಸೆಕ್ಷನ್‌ಗಳ ಮೂಲಕ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್ ನ ಮಾಜಿ ಸಚಿವ

ಮಾನವ ಬಂಧುತ್ವ ವೇದಿಕೆಯಿಂದ ದೂರು:

ಇನ್ನು ಕೋಮುದ್ವೇಷದ ಭಾಷಣ ಮಾಡಿದ್ದಾರೆ ಎಂದು ಮಾನವ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಕೆ. ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸವನ್ನು ಪ್ರಭಾಕರ್ ಭಟ್ ಮಾಡುತ್ತಿದ್ದಾರೆ. ಈ ಹಿಂದೆ ನ್ಯಾಯಾಲಯವು ದ್ವೇಷ ಭಾಷಣ ಮಾಡದಂತೆ ಅವರಿಗೆ ಷರತ್ತು ವಿಧಿಸಿದ್ದರೂ, ಉಲ್ಲಂಘನೆ ಮಾಡಿ ಮತ್ತೆ ಇಂತಹ ಭಾಷಣಗಳನ್ನು ಮಾಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಿಎನ್ ಎಸ್ (ಬಿಎನ್ಎಸ್) ಸೆಕ್ಷನ್ 196, 299, 302, 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಹಿಂದಿನ ಪ್ರಕರಣಕ್ಕೆ ಅವರು ಇನ್ಮುಂದೆ ಯಾವ ಕಾರಣಕ್ಕೂ ದ್ವೇಷದ ಭಾಷಣ ಎಂದು ಹೇಳಿದ್ದರೂ. ಈಗ ಅದರ ಉಲ್ಲಂಘನೆಯಾಗಿದೆ. ಇದೀಗ ಅವರಿಗೆ ಕಾನೂನುಬದ್ಧವಾಗಿ ದೊಡ್ಡ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 11:46 am, ಗುರುವಾರ, 22 ಜನವರಿ 26



Source link

Leave a Reply

Your email address will not be published. Required fields are marked *