Headlines

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್

ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರಿಗೆ, ಸಾರ್ವಜನಿಕರಿಗೆ ರಿಲೀಫ್


ರಾಜ್ಯ ಸರ್ಕಾರಿ ಕಚೇರಿ ಸಮಯ ಬದಲಾವಣೆ: ಬೇಸಿಗೆಯಲ್ಲಿ ನೌಕರರು, ಸಾರ್ವಜನಿಕರಿಗೆ ರಿಲೀಫ್

ಬೆಂಗಳೂರು, (ಮಾರ್ಚ್ 31): ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ (ಕರ್ನಾಟಕ ಸರ್ಕಾರ) ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು…ಬಿಸಿಲಿನ ತಾಪಮಾನದ (ಬೇಸಿಗೆ ತಾಪಮಾನ) ಕರ್ನಾಟಕದ ಹಿನ್ನೆಲೆ ಕಿತ್ತೂರು (ಕಿತ್ತೂರು ಕರ್ನಾಟಕ) ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ (ಕಲ್ಯಾಣ ಕರ್ನಾಟಕ) 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಬದಲಾವಣೆ ಮಾಡಲಾಗಿದೆ. 2026 ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಪ್ರಸ್ತುತ ಇರುವ ಕಚೇರಿಗೆ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಕ್ಕೆ ಇಂದು (ಮಾರ್ಚ್ 31) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರ ಹಿತಾಸಕ್ತಿ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗುವುದು.

2 ತಿಂಗಳು ಸರ್ಕಾರಿ ಕಚೇರಿ ಸಮಯ ಚೇಂಜ್

ಬೆಳಗಾವಿ ವಿಭಾಗದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಸರ್ಕಾರಿ ಕಚೇರಿಗಳಲ್ಲಿ ಸಮಯ ಬದಲಾವಣೆ ಮಾಡಲಾಗಿದೆ. ಇನ್ನು ಕಲಬುರಗಿ ಆವರಣ ಒಳಪಡುವ ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಕಚೇರಿಗಳ ಕೆಲಸದ ಸಮಯ ಬೆಳಗ್ಗೆ 8 ರಿಂದ ಮಧ್ಯಾಹ್ನ 1:30 ರ ತನಕ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಸರ್ಕಾರಿ ಕಚೇರಿಯ ಸಮಯ ಬದಲಾವಣೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆ ಶಾಕ್ : ಎಸ್ಕಾಂಗಳಿಂದ ಹಳೆ ಬಾಕಿ ವಸೂಲಿ; ಯಾವ ವರ್ಗಕ್ಕೆ ಎಷ್ಟು ದರ ಏರಿಕೆ?

ಆದೇಶದಲ್ಲೇನಿದೆ?

ವಿಭಾಗ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ನೌಕರರು ಕರ್ತವ್ಯ ನಿರ್ವಹಿಸುತ್ತಿರುವ ತೊಂದರೆಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸ ಬೆಳಿಗ್ಗೆ, 8.00 ರಿಂದ 1.30 ರವರೆಗೆ ಆದೇಶ ಹೊರಡಿಸಲು ಕೋರಲಾಗಿದೆ. ಪ್ರಸ್ತಾಪಿಸಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದನ್ನು ಪರಿಗಣಿಸಿ, ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಈ ಕೆಳಗಿನಂತೆ ಸೂಚಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳು 2026ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದಲ್ಲಿ ಬೆಳಗಾವಿ ವಿಭಾಗ ವಿಜಯಪುರ ಮತ್ತು ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳಿಗೆ ಬದಲಾಗಿ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾವಣೆ ಮಾಡಲಾಗಿದೆ.

ಇನ್ನು ಬೆಳಗಾವಿ ವಿಭಾಗ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳ ನೌಕರರು ಬದಲಾದ ಸಮಯದಲ್ಲಿ ಯಾವುದೇ ಲೋಪ, ಅಡೆತಡೆಯಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು, ಸಾರ್ವಜನಿಕರಿಗೆ ಯಾವುದೇ ಕರ್ತವ್ಯವಿಲ್ಲದಂತೆ ಮತ್ತು ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಯಾವುದೇ ಕಾರ್ಯವನ್ನು ನಿರ್ವಹಿಸುವ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸುವ ಆದೇಶವನ್ನು ಉಲ್ಲೇಖಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *