ಕಾಂತಾರ ಪಾರ್ಟ್- 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ.

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ, ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು. ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ.

2 ವರ್ಷಗಳ ಹಿಂದೆ ‘ಹನುಮಾನ್’ ಚಿತ್ರ ಕಟ್ಟಿಕೊಟ್ಟಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಪುಷ್ಪ’, ‘ವಾಲ್ತೇರು ವೀರಯ್ಯ’, ‘ವೀರ ಸಿಂಹ ರೆಡ್ಡಿ’, ‘ರಂಗಸ್ಥಲಂ’ ರೀತಿಯ ಅನೇಕ ಹಿಟ್ ಸಿನಿಮಾಗಳನ್ನು ನಿರ್ಮಾಣ ಸಂಸ್ಥೆ ಈ ಬ್ಯಾನರ್‌ನಲ್ಲಿ ಈಗ ರಿಷಬ್ ಶೆಟ್ಟಿ ಅವರ ಜೈ ಹನುಮಾನ್ ಸಿನಿಮಾ ತಯಾರಾಗುತ್ತಿದೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.

ಈ ‘ಜೈ ಹನುಮಾನ್’ ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ ‘ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್’ ಅಡಿಯಲ್ಲಿ ತಯಾರಾಗಲಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ.

ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ.

Source link
Rishab Shetty Movie: ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಮುಹೂರ್ತ! ರಿಷಬ್ ಶೆಟ್ಟಿ ಭಾಗಿ