‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’

‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’


ಬುಕ್ ಮೈ ಶೋ ಮೊದಲಾದ ರೇಟಿಂಗ್ ನೋಡಿ ಜನರು ಸಿನಿಮಾ ವೀಕ್ಷಿಸಲು ತೆರಳೋದು ಸಾಮಾನ್ಯ. ಆದರೆ, ಈಗ ಅದಕ್ಕೆ ಬ್ರೇಕ್ ಬೀಳುತ್ತಿದೆ. ಬುಕ್ ಮೈ ಶೋನಲ್ಲಿ ಬರೋ ರೇಟಿಂಗ್ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ದ್ವೇಷದ ಕಾರಣಕ್ಕೆ ಅನೇಕರು ಸುಳ್ಳು ರೇಟಿಂಗ್ ಕೊಟ್ಟ ಉದಾಹರಣೆ ಇದೆ. ಇದೇ ಕಾರಣದಿಂದ ಸಿನಿಮಾ ತಂಡದವರು ಈ ವಿಷಯದಲ್ಲಿ ಎಚ್ಚೆತ್ತುಕೊಳ್ಳುತ್ತಿದ್ದಾರೆ. ಈಗ ’45’ (45 ಚಲನಚಿತ್ರ) ಹಾಗೂ ‘ಮಾರ್ಕ್’ ಟೀಂ ಇದೇ ತಂತ್ರ ಬಳಸಿದೆ.

ಡಿಸೆಂಬರ್ 11 ರಂದು ತೆರೆಗೆ ಬಂದ ‘ಡೆವಿಲ್’ ತಂಡದವರು ನೆಗೆಟಿವ್ ವಿಮರ್ಶೆ ಸಿಗೋ ಭಯದಲ್ಲಿ ಕೋರ್ಟ್‌ನಿಂದ ಆರ್ಡರ್ ತಂದಿದ್ದರು. ಇದನ್ನು ಬುಕ್ ಮೈ ಶೋ ಆಯಪ್‌ಗೆ ಸಲ್ಲಿಕೆ ಮಾಡಲಾಗಿತ್ತು. ಇದರ ಅನುಸಾರ ಬುಕ್ ಮೈ ಶೋನವರು ರೇಟಿಂಗ್ ನೀಡುವ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿದ್ದರು. ಈಗ ‘ಮಾರ್ಕ್’ ಹಾಗೂ ’45’ ಸಿನಿಮಾ ಕೂಡ ಇದೆ ತಂತ್ರ ಬಳಸಿದೆ.

‘ಮಾರ್ಕ್’ ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಪರಭಾಷಾ ಕಲಾವಿದರೂ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು, ’45’ ಸಿನಿಮಾದಲ್ಲಿ ಉಪೇಂದ್ರ, ಶಿವರಾಜ್‌ಕುಮಾರ್, ರಾಜ್ ಬಿ. ಶೆಟ್ಟಿ ನಟಿಸಿದ್ದಾರೆ. ಈ ಎರಡೂ ಸಿನಿಮಾಗಳು ದೊಡ್ಡ ಬಜೆಟ್ ನಲ್ಲಿ ರೆಡಿ ಆಗಿವೆ. ಹೀಗಾಗಿ ಎರಡೂ ಚಿತ್ರಕ್ಕೆ ತುಂಬಾ ಚೆನ್ನಾಗಿದೆ.

ದ್ವೇಷದ ಕಾರಣಕ್ಕೆ ಸಿನಿಮಾಗೆ ನೆಗೆಟಿವ್ ವಿಮರ್ಶೆ ಹಬ್ಬಿಸೋ ಭಯ ತಂಡವನ್ನು ಕಾಡಿದೆ. ಈ ಕಾರಣದಿಂದ ತಂಡದವರು ಕೋರ್ಟ್ ನಿಂದ ಆರ್ಡರ್ ತಂದಿದೆ. ಮುಂದಿನ ದಿನಗಳಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಇದೇ ಟ್ರೆಂಡ್ ಫಾಲೋ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: ’45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

‘ಮಾರ್ಕ್’ ಹಾಗೂ ’45’ ಎರಡೂ ಕನ್ನಡದ ಸಿನಿಮಾಗಳು. ಈ ಚಿತ್ರಗಳು ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಸಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ. ಎರಡೂ ಸಿನಿಮಾಗೆ ಉತ್ತಮ ಟಾಕ್ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *