
ಸುಧೀರ್ ಅತ್ತಾವರ್ ನಿರ್ದೇಶನ ಮಾಡಿರುವ ‘ಕೊರಗಜ್ಜ’ (ಕೊರಗಜ್ಜ) ಸಿನಿಮಾ ಚಿತ್ರೀಕರಣದ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಸಿನಿಮಾ ನೋಡಲು ಬಿಡುಗಡೆ ಆಗಬೇಕಿತ್ತು ಆದರೆ ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ಈ ಬಾರಿ ಕೆಲವು ವಿಶೇಷ ಕಾರಣಗಳಿಗೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಸಿನಿಮಾ ತಂಡದಿಂದ ಹೊರಬಿದ್ದಿರುವ ಹೊಸ ಅಪ್‌ಡೇಟ್ ಎಂದರೆ ‘ಕೊರಗಜ್ಜ’ ಸಿನಿಮಾ ಇದೀಗ 3ಡಿ ತಂತ್ರಜ್ಞಾನದೊಂದಿಗೆ ಬಿಡುಗಡೆ ಆಗಲಿದೆ.
ಸಾಮಾನ್ಯವಾಗಿ ಚಿತ್ರೀಕರಣದ ವೇಳೆಯಲ್ಲಿ 3ಡಿ ಶೂಟಿಂಗ್ ಮಾಡುವುದು ಸಂಪ್ರದಾಯ. ಆದರೆ ‘ಕೊರಗಜ್ಜ’ ಸಿನಿಮಾವನ್ನು 2ಡಿ ತಂತ್ರಜ್ಞಾನದಲ್ಲಿ ಶೂಟಿಂಗ್ ಮಾಡಲಾಗಿದೆ. ಆದರೆ ಈಗ ಅದನ್ನು 3ಡಿಗೆ ಬದಲಾಯಿಸಲಾಗುತ್ತಿದೆ. 2ಡಿಯಲ್ಲಿ ಶೂಟಿಂಗ್ ಮಾಡಿ ಮತ್ತೆ 3ಡಿ ಗೆ ಕನ್ವರ್ಟ್ ಮಾಡುವುದು ಹೆಚ್ಚು ದುಬಾರಿ. ಆದರೆ ಕೆಲವರ ಸಲಹೆ ಸಿನಿಮಾವನ್ನು 3ಡಿಗೆ ಬದಲಾಯಿಸಲಾಗಿದೆ. ಪ್ರದರ್ಶನಕ್ಕೆ ಒಳ್ಳೆಯ ಅನುಭವ ನೀಡಲು, ಸಿನಿಮಾವನ್ನು ಬೇರೆ ಭಾಷೆಯವರಿಗೆ ತಲುಪುವಂತೆ ಮಾಡಲು 3ಡಿ ತಂತ್ರಜ್ಞಾನದಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.
2ಡಿಯಲ್ಲಿ ಚಿತ್ರೀಕರಣಗೊಂಡ ಸಿನಿಮಾವನ್ನು ದುಬಾರಿ ವೆಚ್ಚದಲ್ಲಿ 3ಡಿ ತಂತ್ರಜ್ಞಾನಕ್ಕೆ ಬದಲಾವಣೆ ಮಾಡಲಾಗುತ್ತಿದ್ದು, ಸುಮಾರು 40 ಮಂದಿ ತಾಂತ್ರಿಕ ತಂಡ ಈ ಕಾರ್ಯದಲ್ಲಿ ತೊಡಗಿದೆ ಎಂದು ನಿರ್ದೇಶಕ ಸುಧೀರ್ ಅತ್ತಾವರ ತಂಡ.
ಇದನ್ನೂ ಓದಿ:’ಕೊರಗಜ್ಜ’ ಸಿನಿಮಾ ತಂಡದ ವಿರುದ್ಧ ಕೊಡಗಿನ ದೈವಾರಾಧಕರು ಮತ್ತು ನರ್ತಕರು ರೊಚ್ಚಿಗೆದ್ದಿದ್ದೇಕೆ?
ಇದರ ಜೊತೆಗೆ ‘ಕೊರಗಜ್ಜ’ ಸಿನಿಮಾದ ಚಿತ್ರೀಕರಣವನ್ನು ನೀರಿನ ಅಡಿಯಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ನಟಿ ಶ್ರುತಿ ಹಾಗೂ ಇನ್ನೂ ಕೆಲವು ಕಲಾವಿದರು ಈಂಡರ್ ವಾಟರ್ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಕೇರಳದ ತಿರುವನಂತಪುರಂ ನಲ್ಲಿ ಖ್ಯಾತ ಮಲೆಯಾಳಂ ನಟ ಮೋಹನ್ ಲಾಲ್ ರವರ ಒಡೆತನದಲ್ಲಿದ್ದ “ವಿಸ್ಮಯ” ಸ್ಟುಡಿಯೋದಲ್ಲಿ ಅಂಡರ್ ವಾಟರ್ ನ ವಿಶೇಷ ಸೆಟ್ ನಿರ್ಮಿಸಿದ ನಟಿ ಶ್ರತಿ ಅಭಿನಯಿಸಿದ ಭಾಗಗಳನ್ನು ಅಡಿಯಲ್ಲಿ ಖ್ಯಾತ ಮಲೆಯಾಳಂ ಸಿನೆಮಾಟೋಗ್ರಾಫರ್ ಮನೋಜ್ ಪಿಳ್ಳೈ ನಾಲ್ಕು ಕ್ಯಾಮರಗಳಲ್ಲಿ ಚಿತ್ರೀಕರಿಸಿದ್ದಾರೆ.
ಈ ವಿಶೇಷ ಶೈಲಿಯ ಚಿತ್ರಕ್ಕಾಗಿ ಶ್ರತಿ ಸುಮಾರು 15ದಿನಗಳ ತಯಾರಿ ಪಡೆದಿದ್ದಾಗಿ ಹೇಳಿದೆ ಚಿತ್ರತಂಡ. ಶೂಟಿಂಗ್ ವೇಳೆ ಮಾರ್ಗದರ್ಶನಕ್ಕಾಗಿ ಸ್ಕ್ಯೂಬಾ ಡೈವರ್ಸ್ ಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಆಂಬ್ಯಲೆನ್ಸ್ ಮತ್ತು ವೈದ್ಯರ ತಂಡ ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿತ್ತು. ಹಾರ್ನೆಸ್ ನಲ್ಲಿ ಸುಮಾರು 30 ಅಡಿ ಎತ್ತರದಿಂದ ನೀರಿಗೆ ಜಿಗಿದು ಮತ್ತೆ ಹಾರಿ ಹೊರಬರುವ ಮೈ ನವಿರೇಳಿಸುವ ಅಪಾಯಕಾರಿ ಸ್ಟಂಟ್ ನಲ್ಲಿ ನಟಿ ಶ್ರತಿ ಪ್ರದರ್ಶಿಸಿ ಎಲ್ಲರನ್ನು ಬಡಿಸಿದರು.ಇದಲ್ಲದೆ ನೀರಿನೊಳಗೆ 22 ಸೆಕೆಂಡ್ ಗಳ ಕಾಲ ಯಾವುದೇ ಆಮ್ಲಜನಕದ ಸಹಾಯವಿಲ್ಲದೆ ಶ್ರತಿ ಅಭಿನಯಿಸಿ ಎಲ್ಲರನ್ನು ದಂಗುಬಡಿಸಿದರು ಎಂದು ಚಿತ್ರತಂಡ ಹೇಳಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ