Headlines

ದೈವ ನಂಬುವವರಿಗೆ ಬೇಸರ ಆಗುವಂತೆ ಮಾಡಬೇಡಿ: ಮೈಸೂರಿಗೆ ಬಂದು ಮನವಿ ಮಾಡಿದ ರಿಷಬ್ ಶೆಟ್ಟಿ

ದೈವ ನಂಬುವವರಿಗೆ ಬೇಸರ ಆಗುವಂತೆ ಮಾಡಬೇಡಿ: ಮೈಸೂರಿಗೆ ಬಂದು ಮನವಿ ಮಾಡಿದ ರಿಷಬ್ ಶೆಟ್ಟಿ


ಬ್ಲಾಕ್ ಬಸ್ಟರ್ ಹಿಟ್ ಆಗಿರುವ ‘ಕಾಂತಾರ: ಅಧ್ಯಾಯ 1’ (ಕಾಂತಾರ ಅಧ್ಯಾಯ 1) ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎರಡು ವಾರ ಕಳೆದರೂ ಈ ಸಿನಿಮಾದ ಹವಾ ಕಡಿಮೆ ಆಗಿಲ್ಲ. ಎಲ್ಲ ಕಡೆ ಇದೇ ಸಿನಿಮಾದ ಬಗ್ಗೆ ಚರ್ಚೆ ನಡೆಯುತ್ತಿದೆ. ಸಿನಿಮಾ ನೋಡಿದ ಬಳಿಕ ಕೆಲವರು ದೈವದ (ದೈವ) ಅನುಕರಣೆ ಮಾಡಿದ್ದಾರೆ. ಚಿತ್ರಮಂದಿರದಲ್ಲೇ ವಿಚಿತ್ರವಾಗಿ ವರ್ತಿಸುತ್ತಿದ್ದಾರೆ. ದೈವವನ್ನು ನಂಬುವವರಿಗೆ ಇದರಿಂದ ಬೇಸರವಾಗಿದೆ. ಆ ಕುರಿತು ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆ ಪ್ರತಿಕ್ರಿಯೆ ನೀಡಿದೆ. ಈಗ ರಿಷಬ್ ಶೆಟ್ಟಿ (ರಿಷಬ್ ಶೆಟ್ಟಿ) ಅವರು ಮೈಸೂರಿನಲ್ಲಿ ತಮ್ಮ ಅನಿಸಿಕೆ.

‘ಈ ಬಗ್ಗೆ ತುಂಬಾ ಹಿಂದೆಯೇ ಕೇಳಿಸಿಕೊಂಡೆ. ಇದನ್ನು ಕೇಳಿಕೊಳ್ಳುತ್ತಿದ್ದೇನೆ ಹಾಗೂ ಮುಂದೆಯೂ ಕೇಳಿಕೊಳ್ಳುತ್ತೇನೆ. ಸಿನಿಮಾದಲ್ಲಿ ಮನರಂಜನೆಯ ಅಂಶ ಇದ್ದೇ ಇರುತ್ತದೆ. ಜನರನ್ನು ಸಿನಿಮಾ ರಂಜಿಸಬೇಕು. ದೈವದ ವಿಚಾರ ಇಟ್ಟುಕೊಂಡು ಸಿನಿಮಾ ಮಾಡಿದರೆ ಅದು ಬರೀ ಸಿನಿಮಾ ಆಗಿ ಇರುವುದಿಲ್ಲ. ಶ್ರದ್ಧೆ ಭಕ್ತಿಯಿಂದ ಸಿನಿಮಾ ಮಾಡುತ್ತೇವೆ’ ಎಂದು ರಿಷಬ್ ಶೆಟ್ಟಿ.

‘ಸಿನಿಮಾದ ಜನಪ್ರಿಯತೆಯನ್ನು ನೋಡಿದಾಗ ಕೆಲವು ಜನರು ಚಿತ್ರಮಂದಿರದಿಂದ ಹೊರಗೆ ಬಂದು ಅನುಕರಣೆ ಮಾಡಿದಾಗ ನಾನು ಕೂಡ ಆರಾಧಕನಾಗಿ, ನಂಬುವವನಾಗಿ ನನಗೆ ಬೇಸರವಾಗುತ್ತದೆ. ಸಿನಿಮಾ ಮಾಡುವಾಗ ನಾವು ಶಿಸ್ತುಬದ್ಧವಾಗಿ ನಡೆದುಕೊಂಡು, ಹಿರಿಯರ ಮಾರ್ಗದರ್ಶನ ತೆಗೆದುಕೊಳ್ಳುತ್ತೇವೆ. ಪ್ರತಿ ಅವಕಾಶವನ್ನು ಉಪಯೋಗಿಸಿಕೊಂಡು ನಾನು ಕೇಳಿಕೊಳ್ಳುತ್ತೇನೆ. ದಯವಿಟ್ಟು ಆ ರೀತಿ ಮಾಡಬೇಡಿ. ದೈವವನ್ನು ನಂಬುವ ಎಲ್ಲಾ ಭಕ್ತರಿಗೆ ಬೇಸರ ಉಂಟು. ಆ ರೀತಿ ಮಾಡಬೇಡಿ ಅಂತ ಕೇಳಿಕೊಳ್ಳುತ್ತೇನೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂತಾರ’ ನೋಡಿ ಹುಚ್ಚಾಟ, ದೈವದ ಅನುಕರಣೆ: ರಿಷಬ್‌ಗೆ ತುಳುಕೂಟ ಪತ್ರ

ಸಿನಿಮಾ ಸಕ್ಸಸ್ ಆಗಿದ್ದರ ಬಗ್ಗೆ ರಿಷಬ್ ಶೆಟ್ಟಿ ಮಾತನಾಡಿದ್ದಾರೆ. ‘ತುಂಬಾ ಖುಷಿಯಾಗುತ್ತದೆ. ನಾನು ಕುಂದಾಪುರದ ಕೆರಾಡಿ ಗ್ರಾಮದಿಂದ ಬಂದು ಚಿತ್ರರಂಗದಲ್ಲಿ ಅವಕಾಶಗಳನ್ನು ಪಡೆದಿದ್ದೇನೆ, ಹಲವಾರು ವರ್ಷಗಳು ಇಲ್ಲಿ ಕೆಲಸ ಮಾಡಿ, ಈಗ ಸಿನಿಮಾ ಮಾಡಿದರೆ ಅದು ಜನರಿಗೆ ತಲುಪುವ ರೀತಿ ಕಂಡು ಖುಷಿಯಾಗಿದೆ. ಮೊದಲು ತುಂಬಾ ಕಷ್ಟ ಆಗುತ್ತಿತ್ತು. ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿದ್ದೆವು. ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನರು ನೋಡುತ್ತಿರುವುದು ನಮಗೆ ಹೆಚ್ಚಿನ ಚೈತನ್ಯವನ್ನು ನೀಡುತ್ತದೆ’ ಎಂದು ರಿಷಬ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *