
ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ- 1 ರ ಫಲಿತಾಂಶ (ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2026 ಪ್ರಕಟವಾಗಿದೆ) ಏಪ್ರಿಲ್ 9 ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಯಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆನ್ಲೈನ್ನಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಿದೆ, ಅಧಿಕೃತ ವೆಬ್ಸೈಟ್ https://www.karresults.nic.in/ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು. ಇನ್ನು ಈ ಬಾರಿ ಪಿಯುಸಿ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ. ಹೌದು…2025-26ನೇ ಸಾಲಿನ ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಶೇ.86 ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳು 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಸುಧಾರಣೆ ಕಂಡಿದೆ.