Headlines

ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ: ಬಿಜೆಪಿ ಕಡೆಗೇ ಬಾಣ ತಿರುಗಿಸಿದ ಸಿಎಂ ಸಿದ್ದರಾಮಯ್ಯ!

ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರ: ಬಿಜೆಪಿ ಕಡೆಗೇ ಬಾಣ ತಿರುಗಿಸಿದ ಸಿಎಂ ಸಿದ್ದರಾಮಯ್ಯ!


ಬೆಂಗಳೂರು, ಡಿಸೆಂಬರ್ 5: ಕರ್ನಾಟಕದಲ್ಲಿ ಶೇ 63ರಷ್ಟು ಭ್ರಷ್ಟಾಚಾರವಿದೆ ಎಂಬ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿಕೆಯನ್ನೇ ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಮುಗಿಬಿದ್ದಿದೆ. ನಿಮಗೆ ಇದ್ದರೆ ತನಿಖೆ ಮಾಡಿಸಿ ಎಂದು ಧೈರ್ಯ ಪ್ರತಿಪಕ್ಷ ನಾಯಕ ಅಶೋಕ್ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದರು. ಆದರೆ, ಇದೀಗ ಆರೋಪವನ್ನು ಸಿದ್ದರಾಮಯ್ಯ (ಸಿದ್ದರಾಮಯ್ಯ) ಬಿಜೆಪಿಗೇ ತಿರುಗುಬಾಣವಾಗಿದ್ದಾರೆ. ಸಾಮಾಜಿಕ ಮಾಧ್ಯಮದ ಮೂಲಕ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಇದ್ದಾಗಲೇ ಭ್ರಷ್ಟಾಚಾರ ಹೆಚ್ಚಿತ್ತು.

ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ಆಧಾರದ ಮೇಲೆ ಬಿ.ವೀರಪ್ಪನವರು ಇಂದು ಮಾತನಾಡಿದ್ದಾರೆ. ಅವರು ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಬಿಎಸ್ ವರದಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್ ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು. ಪ್ರತಿ ಇಲಾಖೆಯಲ್ಲಿ ಕನಿಷ್ಠ 40% ಕಮಿಷನ್ ಚಾಲ್ತಿಯಲ್ಲಿದೆ. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವವರು ಅಂದಿನ ಸಚಿವ ಈಶ್ವರಪ್ಪನವರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ನೀರಾವರಿ ಇಲಾಖೆ ಭದ್ರಾ ಮೇಲ್ದಂಡೆ ಹಾಗೂ ಕಾವೇರಿ ನೀರಾವರಿ ನಿಗಮದಲ್ಲಿ ಭಾರೀ ಅಕ್ರಮ ನಡೆದಿದ್ದು, ಸುಮಾರು ₹20,000 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅವರು ನಿಮ್ಮ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ನೇರಾನೇರ ಆರೋಪ ಮಾಡಿದ್ದಾರೆ. ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ಮಾಡಿ ನಿಮ್ಮ ಹಲವು ಬಂಧು ಮಿತ್ರರು ಜೈಲು ಸೇರಿದ್ದಾರೆ. ಇವೆಲ್ಲಾ ಮರೆತು ಹೋಯಿತೇ? ಹೀಗೆ ಬಿಜೆಪಿ ಕಾಲದ ಹಗರಣಗಳನ್ನು ಪಟ್ಟಿಮಾಡುತ್ತಾ ಹೋದರೆ ಒಂದು ಮಹಾಗ್ರಂಥವನ್ನೇ ಬರೆಯಬಹುದು ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಎಕ್ಸ್ ಸಂದೇಶ

ಇಂದು ”ನ ಖಾವೂಂಗಾ, ನ ಖಾನೆದೂಂಗ” ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತ ಭ್ರಷ್ಟಾಚಾರದಲ್ಲೇ ಮುಳುಗುತ್ತಿದೆ. ಇದಕ್ಕೆ ಟ್ರಾನ್ಸ್‌ಪರೆಸಿ ಇಂಟರ್ನ್ಯಾಷನಲ್ ನವರು ಬಿಡುಗಡೆ ಮಾಡಿರುವ ಜಾಗತಿಕ ಭ್ರಷ್ಟಾಚಾರಯುಕ್ತ ದೇಶಗಳ ಪಟ್ಟಿಯಲ್ಲಿ ಭಾರತ 96ನೇ ಸ್ಥಾನದಲ್ಲಿದೆ ಸಾಕ್ಷಿ. ಮೊದಲು ಆರ್.ಅಶೋಕ್ ಅವರು ತಮ್ಮ ಪ್ರಧಾನ ಸೇವಕರ ಬಳಿ ಭಾರತದ ಈ ದಯನೀಯ ಸ್ಥಿತಿಗೆ ಕಾರಣವೇನು ಎಂಬ ಪ್ರಶ್ನೆಯನ್ನೆತ್ತಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಭ್ರಷ್ಟಾಚಾರ: ನಿಮಗೆ ಧೈರ್ಯ ಇದ್ರೆ ತನಿಖೆ ಮಾಡಿಸಿ; ಆರ್ ಅಶೋಕ್ ಸವಾಲು

ಗೌರವಾನ್ವಿತ ಬಿ.ವೀರಪ್ಪನವರ ಮಾತುಗಳನ್ನು ನಮ್ಮ ಸರ್ಕಾರಕ್ಕೆ ಅನ್ವಯಿಸಿ ಆರ್.ಅಶೋಕ್ ಅವರ ಮತಿಗೇಡಿತನಕ್ಕೆ ಏನೆನ್ನಬೇಕು? ನಮ್ಮ ಸರ್ಕಾರದಲ್ಲಿ ನೇಮಕಾತಿಯಿಂದ ವರ್ಗಾವಣೆಯ ವರೆಗೆ ಎಲ್ಲವನ್ನೂ ಪಾರದರ್ಶಕವಾಗಿಸುವ, ಯಾವುದೇ ರೀತಿಯ ಹಣ, ಅಧಿಕಾರದ ದುರ್ಬಳಕೆಯಾಗದಂತೆ ತಡೆಯುವ ಪ್ರಯತ್ನ ಜಾರಿಯಲ್ಲಿದೆ. ಆರ್.ಅಶೋಕ್ ಅವರೇ, ನೀವು ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎರಡೂವರೆ ವರ್ಷದವರಲ್ಲಿ ಸ್ವಚ್ಛ ಮಾಡುವುದು ಅಸಾಧ್ಯ. ಸ್ವಲ್ಪ ಸಮಯ ಕೊಡಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *