ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆಯ (ಬಳ್ಳಾರಿ ರಾಯಿಟ್ಸ್) ವಿರುದ್ಧ ಬಿಜೆಪಿ ನಾಯಕ ಎನ್. ರವಿಕುಮಾರ್ (ಎನ್ ರವಿಕುಮಾರ್) ಆಕ್ರೋಶ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೂಂಡಾ ರಾಜ್ಯ ಆಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಬೇಕು. ನಾವು ತನಿಖೆಗೆ ತೋರಿಸುತ್ತೇವೆ. ಆರೋಪಕ್ಕೆ ಕೊಡಲು ಆಗದಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದ ತನಿಖೆ ನಡೆಸಲಾಯಿತು ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆ.
ಸಿಎಂ ಸಿದ್ದರಾಮಯ್ಯನವರು ಕೋಗಿಲು ಲೇಔಟ್ ಧ್ವಂಸ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕೊಡುತ್ತೇವೆ ಎಂದು ಹೇಳುತ್ತಾರೆ. ಅರ್ಜಿ ಹಾಕಿರುವವರಿಗೆ ಮನೆಯೇ ಕೊಟ್ಟಿಲ್ಲ. ತುಂಬಾ ಅನುಭವಿ ಸಿಎಂ ನೀವು. ದೇವರಾಜ ಅರಸು ಅವರ ದಾಖಲೆ ಮುರಿಯಲು ಹೊರಟಿದೆ ಎಂದು ಎನ್. ರವಿಕುಮಾರ್ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಬಳ್ಳಾರಿ ಗಲಭೆ: ಮೃತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಇವಿಎಂ ಕುರಿತ ಸಮೀಕ್ಷೆ ವೆಬ್‌ಸೈಟ್‌ನಿಂದ ಡಿಲೀಟ್ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ 5 ಸಾವಿರಕ್ಕೂ ಹೆಚ್ಚು ಜನರನ್ನು ಮಾತಾಡಿಸಿ ಸಮೀಕ್ಷೆ ಮಾಡಲಾಗಿದೆ. ಶೇ. 84ರಷ್ಟು ಜನ ಇವಿಎಂ ಪರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಈ ವರದಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಹೀಗಾಗಿ, ಈಗ ಸಮೀಕ್ಷೆಯನ್ನೇ ಸರ್ಕಾರ ಡಿಲೀಟ್ ಮಾಡಿದೆ ಎಂದು ಟೀಕಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ