ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು


ವಿವಾದಿತ 'ದಿ ಕೇರಳ ಸ್ಟೋರಿ 2' ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ (ಕೇರಳ ಕಥೆ 2) ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್ ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ವಿಪಕ್ಷ ನಾಯಕರಾದ ಆರ್. ಅಶೋಕ್ (ಆರ್ ಅಶೋಕ್)ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಪರಿಷತ್ ಸದಸ್ಯರು ಸಿನಿಮಾ ನೋಡಿದ್ದಾರೆ. ರಾಜ್ಯ ಬಿಜೆಪಿಯಿಂದ ಸಿನಿಮಾ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಾಗಿದೆ. ಈ ಸಿನಿಮಾಗೆ ಕಾಮಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್ ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಿಂದ ಕೇರಳ ರಾಜ್ಯದ ಘನತೆಗೆ ಧಕ್ಕೆ ಆಗಿದೆ ಎಂದು ಕೋರ್ಟ್ ಮೆಟ್ಟಿಲು ಏರಿದ್ದರು. ಆದ್ದರಿಂದ ಬಿಡುಗಡೆಗೂ ಮುನ್ನ ಈ ಸಿನಿಮಾ ಸಾಕಷ್ಟು ವಿವಾದ ಸೃಷ್ಟಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *