ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ

ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ


ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್! 90 ದಿನಗಳ ಮಾತೃತ್ವ ರಜೆ ಘೋಷಣೆ

ಬೆಂಗಳೂರು, ಮಾರ್ಚ್ 06: ಕರ್ನಾಟಕದ 2026–27ನೇ ಸಾಲಿನ ಬಜೆಟ್ (ಕರ್ನಾಟಕ ಬಜೆಟ್) ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ಮಾತೃತ್ವ ರಜೆ ಸೌಲಭ್ಯವನ್ನು ನೀಡಲಾಗುವುದು ಎಂದು ಅವರು ಸೂಚಿಸಿದ್ದಾರೆ. ರಜೆ ಸೌಲಭ್ಯವನ್ನು ಮುಂದಿನ ಶಿಕ್ಷಣ ಸಾಲದಿಂದ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕ್ರಮದಿಂದ ರಾಜ್ಯದ ಸಾವಿರಾರು ಮಹಿಳಾ ಅತಿಥಿ ಉಪನ್ಯಾಸಕರಿಗೆ ನೆರವಾಗಲಿದೆ. ಈವರೆಗೆ ಅತಿಥಿ ಉಪನ್ಯಾಸಕರಿಗೆ ರಜೆಯ ಕುರಿತು ಸ್ಪಷ್ಟ ಸೌಲಭ್ಯವಿಲ್ಲ ಎಂಬ ಕಾರಣದಿಂದ ಹಲವು ಮಹಿಳಾ ಉಪನ್ಯಾಸಕರ ಸಮಸ್ಯೆ ಎದುರಿಸುತ್ತಿದೆ. ಇದೀಗ ಸರ್ಕಾರ ಈ ಸಮಸ್ಯೆ ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದ ಈ 90 ದಿನಗಳ ಮಾತೃತ್ವ ರಜೆ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಇದರ ಮೂಲಕ ಮಹಿಳಾ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಸಮತೋಲನಗೊಳಿಸಲು ಸಹಕಾರಿ ಎಂದು ಸರ್ಕಾರವು.

ಇದನ್ನೂ ಓದಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ !

ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳನ್ನು ಮುಂದುವರಿಸಲಾಗುವುದು. ಅಜೀಂ ಪ್ರೇಮ್‌ಜಿ ಫೌಂಡೇಶನ್‌ ವತಿಯಿಂದ 2025–26ನೇ ಸಾಲಿನಲ್ಲಿ ಉನ್ನತ ಶಿಕ್ಷಣಕ್ಕಾಗಿ 37 ಸಾವಿರ ವಿದ್ಯಾರ್ಥಿಗಳಿಗೆ ವಾರ್ಷಿಕ 30 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಯೋಜನೆಯ ವ್ಯಾಪ್ತಿಗೆ ಬಾರದ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ‘ದೀಪಿಕಾ ವಿದ್ಯಾರ್ಥಿ ವೇತನ ಯೋಜನೆ’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ಒದಗಿಸಲಾಗುವುದು ಎಂದು ಸಿಎಂ ಪ್ರಾರಂಭಿಸಲಾಗಿದೆ.

ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *