
ಬೆಂಗಳೂರು, ಮಾರ್ಚ್ 6: ಕರ್ನಾಟಕ ಸರ್ಕಾರವು 2026 ರ ಬಜೆಟ್‌ನಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಮಹತ್ವದ ಯೋಜನೆ ಪ್ರಕಟಿಸಲಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ ರಾಜ್ಯದ 4.54 ಕೋಟಿ ಬಡವರಿಗೆ 5 ಕೆಜಿ ಹೆಚ್ಚುವರಿ ಅಕ್ಕಿಯನ್ನು ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗೆ 17,167 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಈಗ, ಪ್ರತಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ, ತಿಂಗಳ ಪೌಷ್ಟಿಕಾಂಶವುಳ್ಳ ಇಂದಿರಾ ಆಹಾರ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ. ಈ ಕಿಟ್‌ನಲ್ಲಿ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 6,200 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಕರ್ನಾಟಕ ಬಜೆಟ್ ಕುರಿತ ಕ್ಷಣಕ್ಷಣದ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ