Karnataka Budget 2026 Highlights: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್​ ಮುಖ್ಯಾಂಶ ಇಲ್ಲಿದೆ

Karnataka Budget 2026 Highlights: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್​ ಮುಖ್ಯಾಂಶ ಇಲ್ಲಿದೆ


ಕರ್ನಾಟಕ ಬಜೆಟ್ 2026 ಮುಖ್ಯಾಂಶಗಳು: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್ ಮುಖ್ಯಾಂಶ ಇಲ್ಲಿದೆ

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯನವರು (ಸಿದ್ದರಾಮಯ್ಯ) 2026-27ನೇ ಸಾಲಿನ ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (ಕರ್ನಾಟಕ ಬಜೆಟ್ 2026). ಈ ಬಾರಿಯ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಾಗಿರುತ್ತದೆ. ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದೆ ಎಂದು ಸಿದ್ದರಾಮಯ್ಯನವರು 3 ಗಂಟೆ 5 ನಿಮಿಷ ಮಂಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ ರೂ. ತೆರಿಗೆ ಹೆಚ್ಚೆಂದರೆ, 2026-2027ನೇ ಸಾಲಿನಲ್ಲಿ 3.15 ಲಕ್ಷ ಕೋಟಿ ರಾಜಸ್ವ ಸಂಗ್ರಹದ ಗುರಿಯನ್ನು ಹೊಂದಿಸಲಾಗಿದೆ. ಬ್ರ್ಯಾಂಡ್ ಬೆಂಗಳೂರು ಸೇರಿದಂತೆ ಹೆಚ್ಚಿನ ಬಂಡವಾಳ ಆಕರ್ಷಣೆ, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಇನ್ನು ನಾವು ಬೆಂಕಿಯನ್ನು ಬೆಳಕಾಗಿಸಿ ಮುಂದಿನ ಹೆಜ್ಜೆ ಇರಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

ಬರೋಬ್ಬರಿ 3 ಗಂಟೆ 5 ನಿಮಿಷ ಬಜೆಟ್ ಮಂಡನೆ

ಸಿಎಂ ಸಿದ್ದರಾಮಯ್ಯ ನಿರರ್ಗಳವಾಗಿ 3 ಗಂಟೆ 5 ನಿಮಿಷ ಕಾಲ ಬಜೆಟ್ ಭಾಷಣ ಮಾಡಿದರು. ನೀರೂ ಕುಡಿಯದೆ, ನಿಂತಲ್ಲಿಂದ ಕದಲದೆ, ನಿರಂತರವಾಗಿ ಬಜೆಟ್ ಮಂಡಿಸಿದರು. ಅವರಿಗೆ ಕಾಲು ನೋವು ಇರುವ ಕಾರಣ ಬಜೆಟ್ ಮಧ್ಯೆ ಕುಳಿತು ಓದಿ ಎಂದು ಸಲಹೆ ನೀಡಿ. ಆದರೆ, ಸಿದ್ದರಾಮಯ್ಯ ಸಾಧ್ಯವಾದಷ್ಟು ನಿಂತುಕೊಂಡೇ ಓದುತ್ತೇನೆ. ಕಷ್ಟಪಟ್ಟು ಕುಳಿತುಕೊಳ್ಳುತ್ತೇನೆಂದು ಎದ್ದು ನಿಂತುಕೊಂಡೇ ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಿದರು. ಬಳಿಕ ಸಂಪುಟ ಸಹೋದ್ಯೋಗಿಗಳ ಜೊತೆ ಫೋಟೋ ತೆಗೆಸಿಕೊಂಡರು. ಬಜೆಟ್ ಮೇಲಿನ ಚರ್ಚೆಯನ್ನು ಸೋಮವಾರಕ್ಕೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ 2026: ಬಜೆಟ್‌ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು ಪಾಲು?

ಕರ್ನಾಟಕ ಬಜೆಟ್ 2026 ರ ಮುಖ್ಯಾಂಶಗಳು

  1. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 11G ಮಾದರಿ ಆರ್ಥಿಕತೆಯ ಘೋಷಣೆ.
  2. ಪ್ರಸಕ್ತ ವರ್ಷದಲ್ಲಿ 56 ಸಾವಿರದ 432 ಉದ್ಯೋಗ ನೇಮಕಾತಿ
  3. ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧಿ ಹೆಸರು
  4. ಅನ್ನಭಾಗ್ಯ: 5 ಕೆಜಿ ಅಕ್ಕಿ ಜೊತೆ ಇಂದಿರಾ ಕಿಟ್‌ ವಿತರಣೆ
  5. ಇಂದಿರಾ ಕಿಟ್‌ : ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಹೆಸರು ಕಾಳು, ಉಪ್ಪು
  6. 16 ವರ್ಷದ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್
  7. 800 ಕರ್ನಾಟಕ ಪಬ್ಲಿಕ್ ಸ್ಕೂಲ್, ಸರ್ಕಾರಿ ಶಾಲೆಗಳು ಆರಂಭ
  8. ಎಲ್ಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಚುನಾವಣೆ ಪುನರಾರಂಭ
  9. ಮಹಿಳೆಯರು ಮಕ್ಕಳ ರಕ್ಷಣೆಗಾಗಿ ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಆರಂಭ
  10. ಬೆಂಗಳೂರು, ಧಾರವಾಡದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’
  11. ವಿವಿಗಳಲ್ಲಿ ಜಾತಿ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ
  12. ಕುವೆಂಪು ವಿವಿಯಲ್ಲಿ ಯು.ಆರ್.ಅನಂತಮೂರ್ತಿ ಅಧ್ಯಯನಪೀಠ ಸ್ಥಾಪನೆ
  13. ವಿಕ್ಟೋರಿಯಾ ಆಸ್ಪತ್ರೆ, ಶಾಂತವೇರಿ ಗೋಪಾಲಗೌಡ ಎಂದು ಮರುನಾಮಕರಣ
  14. 4.90 ಲಕ್ಷ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ನಿರ್ಧಾರ
  15. ಬೆಂಗಳೂರು ಅಭಿವೃದ್ಧಿಗೆ ಒಟ್ಟು ₹7,000 ಕೋಟಿ ಮೀಸಲು
  16. ಬೆಂಗಳೂರಿನಲ್ಲಿ 40 ಕಿ.ಮೀ ಸುರಂಗ ಮಾರ್ಗ ನಿರ್ಮಾಣ
  17. ಬೆಂಗಳೂರಿನ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹಲವು ಯೋಜನೆ
  18. ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
  19. ಮೈಸೂರನ್ನು ಎರಡನೇ ಐಟಿ ರಾಜಧಾನಿಯಾಗಿ ಬೆಳೆಸಲು ಉತ್ತೇಜನ
  20. 38 ಲಕ್ಷ ರೈತರಿಗೆ ಸಾಲ ನೀಡಲು $30,000 ಕೋಟಿ ಮೀಸಲು
  21. ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭ
  22. . ಬೆಂಗಳೂರು, ಬೀದರ್‌ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ
  23. ಪಶುಗಳ ರೋಗ ಪತ್ತೆಗಾಗಿ ಸಿಟಿ ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆ
  24. 100 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ವಿಸ್ತಾರ ಯೋಜನೆ
  25. ಕೃಷಿ ಕಡಿತಕ್ಕೆ ಹೈಟೆಕ್ ಹಾರ್ವೆಸ್ಟರ್ ಹಬ್, ಕೋಲಾರದಲ್ಲಿ ರೈತ ಮಾಲ್
  26. ಅಲ್ಪಸಂಖ್ಯಾತ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಭಾಗ್ಯ
  27. ಬಾಣಂತಿಯರಿಗೆ ಬಿಸಿಯೂಟ. ಮರಣ ಪ್ರಮಾಣ ತಗ್ಗಿಸಲು ಕ್ರಮ
  28. ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಇನ್ಸುಲಿನ್
  29. ಕಲ್ಯಾಣ ಕರ್ನಾಟಕದಲ್ಲಿ 1,000 ಕೋಟಿ ವೆಚ್ಚದಲ್ಲಿ 1,124 ಕೀಮೀ ಕಲ್ಯಾಣ ಪಥ
  30. ರಾಜ್ಯಾದ್ಯಂತ 1,250 ಇಟಿಕ್‌ ವಾಹನ ಚಾರ್ಚಿಂಗ್ ಪಾಯಿಂಟ್‌

ಹತ್ತು ಹಲವು ಘೋಷಣೆಗಳೊಂದಿಗೆ ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ ಹಾಗೂ ನವ ಕರ್ನಾಟಕದ ನಿರ್ಮಾಣ ಎಂಬ ದೂರದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026-27ನೇ ಸಾಲಿನ ರಾಜ್ಯ ಆಯವ್ಯಯವನ್ನು ಮಂಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *