
ಬೆಂಗಳೂರು, ಮಾರ್ಚ್ 06: ಕರ್ನಾಟಕದ ಇತಿಹಾಸದಲ್ಲೇ ಐತಿಹಾಸಿಕ 17ನೇ ಬಜೆಟ್ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ್ದಾರೆ. ರೈತರು, ಮಹಿಳೆಯರು ಸೇರಿದಂತೆ ಮಕ್ಕಳಿಗೆ ಆದ್ಯತೆ ನೀಡಲಾಗಿದೆ. ಅದರಲ್ಲೂ 16 ವರ್ಷದ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್ (ಸಾಮಾಜಿಕ ಮಾಧ್ಯಮ ನಿಷೇಧ) ಮಾಡಲಾಗಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಈ ನಡೆಯನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ (ಲಹರ್ ಸಿಂಗ್ ಸಿರೋಯಾ) ಸ್ವಾಗತಿಸಿದ್ದಾರೆ.
ಸರ್ಕಾರದ ನಡೆಗೆ ಲಹರ್ ಸಿಂಗ್ ಸಿರೋಯಾ ಮೆಚ್ಚುಗೆ
ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ‘ಕರ್ನಾಟಕ ಸರ್ಕಾರವು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ನಾನು ಸ್ವಾಗತಿಸುತ್ತೇನೆ. ಈ ವಿಷಯವನ್ನು ನಾನು ಸಂಸತ್ತಿನಲ್ಲಿ ವಿಶೇಷ ಪ್ರಸ್ತಾಪದ ಮೂಲಕ ಧ್ವನಿ ಎತ್ತಿದ್ದೆ’ ಎಂದು ಹೇಳಿದ್ದಾರೆ.
ಲಹರ್ ಸಿಂಗ್ ಸಿರೋಯಾ ಟ್ವೀಟ್
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. ನಾನು ಸಂಸತ್ತಿನಲ್ಲಿ ವಿಶೇಷ ಉಲ್ಲೇಖದ ಮೂಲಕ ಈ ವಿಷಯವನ್ನು ಪ್ರಸ್ತಾಪಿಸಿದ್ದೆ (ಕೆಳಗಿನ ಎಳೆಯನ್ನು ನೋಡಿ). ನಮ್ಮ ಕಿರಿಯರ ಹಿತಾಸಕ್ತಿ ಕಾಪಾಡುವ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದ್ದರು… https://t.co/Bxtz7YQbO2
– ಲಹರ್ ಸಿಂಗ್ ಸಿರೋಯಾ (@LaharSingh_MP) ಮಾರ್ಚ್ 6, 2026
‘ಇತ್ತೀಚೆಗೆ ನಡೆದ ಎಐ ಶೃಂಗಸಭೆಯಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮುಂದಿನ ಯುವ ಪೀಳಿಗೆಯ ಹಿತಾಸಕ್ತಿಯನ್ನು ಭದ್ರಪಡಿಸುವ ಬಗ್ಗೆ ಮಾತನಾಡಿದ್ದರು’ ಎಂದು ಹೇಳಿದರು.
ಇದನ್ನೂ ಓದಿ: ಕರ್ನಾಟಕ ಬಜೆಟ್ 2026:16 ವರ್ಷದೊಳಗಿನ ಮಕ್ಕಳ ಸಾಮಾಜಿಕ ಜಾಲತಾಣ ಬಳಕೆ ನಿಷೇಧ! ಕರ್ನಾಟಕ ಸರ್ಕಾರದ ಮಹತ್ವದ ನಿರ್ಧಾರ
‘ಮಕ್ಕಳಲ್ಲಿ ಸ್ಮಾರ್ಟ್‌ಫೋನ್ ಬಳಕೆಗೆ ಮಿತಿಗಳನ್ನು ವಿಧಿಸುವ ಅಗತ್ಯವನ್ನೂ ನನ್ನ ಸಂಸತ್ತಿನ ಭಾಷಣದಲ್ಲಿ ಪ್ರಸ್ತಾಪಿಸಿದ್ದೇನೆ. ಈ ವಿಷಯವನ್ನು ಗಂಭೀರವಾಗಿ ನಿರ್ವಹಿಸಲು ಎಂಬ ನಿರೀಕ್ಷೆ ನನಗಿದೆ. ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ವಿಷಯದಲ್ಲಿ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ಜಾರಿಗೆ ತರಲು ಸ್ಪಷ್ಟ ಮತ್ತು ಪರಿಣಾಮಕಾರಿ ನಿಯಮಾವಳಿಗಳನ್ನು ರೂಪಿಸಬೇಕಾಗಿದೆ’ ಎಂದು ಲಹರ್ ಸಿಂಗ್ ಸಿರೋಯಾ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.