Headlines

ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ

ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ


ಉಪ ಚುನಾವಣೆ: ಕಾಂಗ್ರೆಸ್ ನಲ್ಲಿ ಬಗೆಹರಿದ ಟಿಕೆಟ್ ಕಗ್ಗಂಟು; ಮುಂದುವರಿದ ಗೊಂದಲ

ಬೆಂಗಳೂರು, ಮಾರ್ಚ್ 19: ದಾವಣೆಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆಗಳಿಗೆ ವಿಪಕ್ಷ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಆದರೆ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಈ ಬಗ್ಗೆ ಗೊಂದಲ ಮುಂದುವರಿದಿದ್ದು ಅಭ್ಯರ್ಥಿಗಳ ಆಯ್ಕೆಯೇ ಕಗ್ಗಂಟಾಗಿ ಮಾರ್ಪಟ್ಟಿದೆ. ಬಾಗಲಕೋಟೆಯಲ್ಲಿ ಮೇಟಿಸ್ಥರಿಗೆ ಟಿಕೆಟ್ ಪಕ್ಕಾ ಎನ್ನಲಾಗಿದ್ದರೂ ನಾಲ್ವರು ಮಕ್ಕಳ ಮುಂದೆ ಯಾರಿಗೆ ಪಕ್ಷ ಮಣೆ ಹಾಕಿದ್ದಾರೆ ಎಂಬ ಪ್ರಶ್ನೆ ಕುಟುಂಬಕ್ಕೆ ಎದುರಾಗಿದೆ. ಮತ್ತೊಂದೆಡೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಕೈಮನೆಯೊಳಗೆಯೇ ಭಾರಿ ಗುದ್ದಾಟದ ಕಾರಣ ಅಭ್ಯರ್ಥಿ ಯಾರಾಗಬಹುದೆಂಬ ಬಗ್ಗೆ ಸ್ವಪಕ್ಷ ನಾಯಕರಿಗೆ ಸ್ಪಷ್ಟತೆ ಸಿಕ್ಕಿಲ್ಲ.

ಮೇಟಿ ಮಕ್ಕಳ ನಡುವೆಯೇ ವಾರ್

ಬಾಗಲಕೋಟೆ ಉಪಚುನಾವಣೆ ಟಿಕೆಟ್ ವಿಚಾರವಾಗಿ ಹೆಚ್.ವೈ. ಮೇಟಿ ಅವರ ಮಕ್ಕಳ ನಡುವೆಯೇ ದಂಗಲ್ ಶುರುವಾಗಿದೆ. ಈ ಕುಟುಂಬವೇ ಪಕ್ಕಾ ಕಾಂಗ್ರೆಸ್ ಕ್ಯಾಂಡಿಡೇಟ್ ಎನ್ನಲಾಗಿದ್ದರೂ ಮೇಟಿ ಮಕ್ಕಳ ಮೇಲೆ ಯಾರನ್ನು ಪಕ್ಷ ಆಯ್ಕೆ ಮಾಡಲಿದೆ ಎಂಬ ಗೊಂದಲ ಉಂಟಾಗಿದೆ. ಯಾರಿಗೆ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಮೇಟಿ ಮಕ್ಕಳಿಗೆ ಸಿಎಂ ಸಲಹೆ, ಸೂಚನೆ ಅದಾಗಲೇ ಗೊತ್ತಾಗಿದೆ. ಹೀಗಿದ್ದರೂ ಟಿಕೆಟ್ ಕೊಡದಿದ್ದರೆ ಬಂಡಾಯ ಸ್ಪರ್ಧೆ ಎಂದು ಮೇಟಿಯವರ ಕಿರಿಯ ಪುತ್ರಿ ಮಹಾದೇವಿ ಮೇಟಿ ಹೇಳುತ್ತಿರುವುದು ತಲೆನೋವಾಗಿ ಮಾರ್ಪಟ್ಟಿದೆ. ಮಲ್ಲಿಕಾರ್ಜುನ ಮೇಟಿ ಅಥವಾ ಉಮೇಶ್ ಮೇಟಿ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಿ ಕೈ ನಾಯಕರು ಚರ್ಚೆ ನಡೆಸಿದ್ದು, ಆ ಮೇಲಕ್ಕೆ ಉಮೇಶ್ ಮೇಟಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಒಂದೊಮ್ಮೆ ಹೀಗೇ ಆಡದಲ್ಲಿ ಮಹಾದೇವಿ ಮೇಟಿ ನಡೆ ಏನು ಎಂಬ ಬಗ್ಗೆಯೂ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಯಾರು ಗೊತ್ತಾ?

ದಾವಣೆಗೆರೆ ‘ಕೈ’ ಮನೆಯಲ್ಲಿ ದಂಗಲ್

ಇತ್ತ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಗಾಗಿ ದೊಡ್ಡ ಪೈಪೋಟಿಯೇ ನಡೆಯುತ್ತಿದೆ. ಅಲ್ಪಸಂಖ್ಯಾತ ಸಮುದಾಯದವರೇ ಅಭ್ಯರ್ಥಿಯಾಗಬೇಕು ಎಂದು ಮುಸ್ಲಿಂ ನಾಯಕರು ಪಟ್ಟು ಹಿಡಿದಿದ್ದಾರೆ, ಮತ್ತೊಂದೆಡೆ ತಮ್ಮ ಪುತ್ರ ಸಮರ್ಥ್ ಅವರನ್ನು ಪಕ್ಷ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ ಎಂದು ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಹಠ ಹಿಡಿದಿದ್ದಾರೆ. ಕಳೆದ ಮೂರು ದಿನಗಳಿಂದ ವಿಧಾನಸಭಾ ಅಧಿವೇಶನಕ್ಕೆ ಹಾಜರಾದ ಮಲ್ಲಿಕಾರ್ಜುನ್, ಉಸ್ತುವಾರಿ ಸಮಿತಿ ಸಭೆಗೂ ಹಾಜರಾಗಿದ್ದಾರೆ. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿದೆ. ಶಾಮನೂರು ಕುಟುಂಬಸ್ಥರ ಪರ ಕೆಲವು ಸಚಿವರು ಬ್ಯಾಟಿಂಗ್ ಮಾಡಿದ್ದರೆ, ಇನ್ನು ಕೆಲವರು ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿದ್ದಾರೆ. ಉಸ್ತುವಾರಿ ಸಮಿತಿಯಲ್ಲೂ ಎಂಟು ಮಂದಿಯ ಹೆಸರು ಪ್ರಸ್ತಾಪವಾಗಿದ್ದು, ಆ ಮೇಲಿರುವ ಐವರ ಹೆಸರು ಅಲ್ಪಸಂಖ್ಯಾತ ಸಮುದಾಯದವರದ್ದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *