ಬೆಂಗಳೂರು, (ಡಿಸೆಂಬರ್ 15): ಕಳೆದ ನಾಲ್ಕು ವರ್ಷಗಳಿಂದ ಬಾಕಿ ಇರುವ ತಾಲೂಕು , ಜಿಲ್ಲಾ ಪಂಚಾಯಿತಿ ಚುನಾವಣೆ (ZP ಮತ್ತು TP ಚುನಾವಣೆಗಳು) ನಡೆಸಲು ಸರ್ಕಾರ ಕೊನೆಗೆ ಆಸಕ್ತಿ ತೋರಿದೆ. ನನೆಗುದಿಗೆ ಬಿದ್ದಿದ್ದ ಕರ್ನಾಟಕದ (ಕರ್ನಾಟಕ) ಎಲ್ಲಾ ಗ್ರಾಮ ಪಂಚಾಯತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ 2026ರ ಏಪ್ರಿಲ್ನಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಹಳ್ಳಿಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ
ಕಳೆದ ನಾಲ್ಕೈದು ವರ್ಷಗಳಿಂದ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದಿರಲಿಲ್ಲ. ಜೊತೆಗೆ ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದೆ, ಗ್ರಾಮ ಪಂಚಾಯ್ತಿಗಳ ಅವಧಿಯೂ ಮುಗಿಯುತ್ತಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ವಿಳಂಬವಾದ ಪ್ರಕರಣ ನ್ಯಾಯಾಲಯದಲ್ಲಿದ್ದು, ತ್ವರಿತಗತಿಯಲ್ಲಿ ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವೂ ಇದೆ.
ಇದನ್ನೂ ಓದಿ: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆಗೂ ಕೂಡಿಬಂತು ಕಾಲ: ಯಾವಾಗ ಎಲೆಕ್ಷನ್?
ಈ ಸಂಬಂಧ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿದ್ದು, ಪಂಚಾಯತಿ, ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ, ವಿವಿಧ ಪುರಸಭೆ ಹಾಗೂ ಗ್ರಾಮ ಸೇರಿದಂತೆ 6500ಕ್ಕೂ ಹೆಚ್ಚು ನಗರ ಗ್ರಾಮೀಣ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್ನಲ್ಲಿ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ 30 ತಿಂಗಳ ಅವಧಿಯಲ್ಲಿ ಇದುವರೆಗೂ ಒಂದೂ ಸ್ಥಳೀಯ ಸಂಸ್ಥೆ ಚುನಾವಣೆ ಕೂಡ ನಡೆದಿಲ್ಲ. ಹೀಗಾಗಿ ಅನಗತ್ಯ ವಿಳಂಬ ಮಾಡದೆ ಸ್ಥಳೀಯ ಸಂಸ್ಥೆಗಳಿಗೆ ವ್ಯಾಪ್ತಿ ಪುನರ್ ವಿಂಗಡಣೆ ಮಾಡಿ ಅಂತಿಮ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕು. ಬಳಿಕ ಚುನಾವಣಾ ಅಧಿಸೂಚನೆಗೆ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ತೀರ್ಮಾನಿಸಲಾಗಿದೆ.
2016ರಲ್ಲಿ ನಡೆದ ಪಂಚಾಯ್ತಿ ಎಲೆಕ್ಷನ್
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ 2016ರ ಏಪ್ರಿಲ್ನಲ್ಲಿ ಚುನಾವಣೆ ನಡೆದಿತ್ತು. ಅಂದು ಆಯ್ಕೆಯಾದ ಸದಸ್ಯರ ಅಧಿಕಾರವಧಿ 2021ರ ಏಪ್ರಿಲ್ 27 ರಂದು ಅಂತ್ಯವಾಗಿತ್ತು. ಅವಧಿ ಮುಗಿಯುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ನಾನಾ ಕಾರಣದಿಂದ ಚುನಾವಣೆ ನಡೆಸದೇ ಐದು ವರ್ಷ ವಿಳಂಬವಾಗಿದ್ದು, 206ರ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸಲು ಅನುಕೂಲವಾಗುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಹಕಾರ ನೀಡಲು ತೀರ್ಮಾನಿಸಲಾಗಿದೆ.
ಈ ನಾಯಕರಿಗೆ ಕರೆ ನೀಡಲಾಗಿದೆ ಡಿಕೆಶಿ
ಪಾಲಿಕೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಸೇರಿದಂತೆ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಪಕ್ಷದ ನಾಯಕರಿಗೆ ಕರೆ ನೀಡಿದ್ದಾರೆ ಜೊತೆಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ. ಪಾಲಿಕೆ ಚುನಾವಣೆಯ ಮೀಸಲಾತಿ ಪಟ್ಟಿ ಇಂದು ಬಿಡುಗಡೆಯಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಗೆ ಅರ್ಜಿ ಕರೆಯಬಹುದು. ಈಗ ಹೊಸ ಮತದಾರರ ಪಟ್ಟಿ ರಚನೆಯಾಗಲಿದೆ. ಕೂಡಲೇ ಮನೆಗೆ ಹೋಗಿ ಖಾತಾ ಯೋಜನೆ, ಆಸ್ತಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸಿ ಪ್ರಚಾರ ಮಾಡಬೇಕು ಎಂದು ಕರೆ ನೀಡಿದ ನಂತರ ಇಲ್ಲಿ ಸ್ಮರಿಸಬಹುದು.
ಹಳ್ಳಿಗಳಲ್ಲಿ ಗೆರಿಗೆದರಿದ ರಾಜಕೀಯ
ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಎಲೆಕ್ಷನ್ ಯಾವಾಗ ಬರುತ್ತವೋ ಎಂದು ಹಳ್ಳಿಗಳಲ್ಲಿ ಚಾತಕ ಪಕ್ಷಗಳಂತೆ ಕಾಯುತ್ತಿದ್ದರು ಲೋಕಲ್ ಲೀಡರ್ಸ್ ಎದ್ದು ಕುಳಿತಿದ್ದಾರೆ. ಇದರಿಂದ ಲೋಕಲ್ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎರಡ್ಮೂರು ವರ್ಷಗಳ ಹಿಂದೆಯೇ ತಮಗೆ ಈ ಕ್ಷೇತ್ರದ ಟಿಕೆಟ್ ಬೇಕೆಂದು ನಾಯಕರು ಹೇಳಿಕೊಂಡು ಬಂದಿದ್ದಾರೆ. ಇದೀಗ ಸರ್ಕಾರ, ಚುನಾವಣೆ ನಡೆಸಲು ಮುಂದಾಗಿರುವ ನಾಯಕರು, ಆಯ್ಕೆ ಮಾಡಿಕೊಂಡಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಟಿಕೆಟ್ಗಾಗಿ ದುಂಬಾಲು ಬಿದ್ದಿದ್ದಾರೆ.