ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲು ‘ಬ್ಯಾಲೆಟ್ ಪೇಪರ್ʼ ಬಳಕೆ: ಸಂಪುಟ ನಿರ್ಧಾರ


ಬೆಂಗಳೂರು, (ಫೆಬ್ರವರಿ, 05): ಕರ್ನಾಟಕ(ಕರ್ನಾಟಕ) ಬಹುತೇಕ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ. ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳ ಚುನಾವಣೆ (ಗ್ರಾಮ ಪಂಚಾಯಿತಿ ಚುನಾವಣೆ) ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳೆವಣಿಗೆಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು (ಫೆಬ್ರವರಿ 05) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ ದೊರೆತಿದೆ. ಇದರೊಂದಿಗೆ ಸ್ಥಳೀಯ ಸಂಸ್ಥೆ ಅಂದ್ರೆ ಜಿಲ್ಲಾ, ತಾಲೂಕು, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ಬ್ಯಾಲೆಟ್ ಪೇಪರ್ ಬಳಕೆಗೆ ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ತಾಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮೂಹೂರ್ತ ಫಿಕ್ಸ್: ಗರಿಗೆದರಿದ ಹಳ್ಳಿ ರಾಜಕೀಯ

ಮತಗಳ್ಳತನದ ಪ್ರಕರಣಗಳು ಬಯಲಾದ ಬಳಿಕ ಜನಸಾಮಾನ್ಯರಲ್ಲಿ ಇವಿಎಂ ಮೇಲಿನ ವಿಶ್ವಾಸಾರ್ಹತೆ ಕಡಿಮೆಯಾಗಿದೆ. ಮತಗಳ್ಳತನಕ್ಕೆ ಹಲವಾರು ದೂರುಗಳು ಬಂದಿವೆ. ಆದ್ದರಿಂದ ಸಚಿವ ಸಂಪುಟವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಐವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ನಡೆಸುವಂತೆ ಚುನಾವಣೆ ಆಯೋಗಕ್ಕೆ ತಿಳಿಸಲಾಗಿದೆ.

ಗ್ರೇಟರ್ ಬೆಂಗಳೂರು (ಜಿಬಿಎ) ಚುನಾವಣೆಯನ್ನೂ ಸಹ ಬ್ಯಾಲೆಟ್ ಪೇಪರ್ ನಡೆಸಲು ನಿರ್ಣಯಿಸಿದೆ, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗವೂ ಸಹ ಜಿಬಿಎ ಎಲೆಕ್ಷನ್ ನಲ್ಲಿ ಇವಿಎಂ ಬಳಸಲಾಗಿದೆ. ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಹ ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಏಪ್ರಿಲ್-ಮೇನಲ್ಲಿ ಸ್ಥಳೀಯ ಸಂಸ್ಥೆ ಎಲೆಕ್ಷನ್?

ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಿನಲ್ಲಿ ಮುಗಿಯಲಿದೆ. ಹೀಗಾಗಿ 2026ರ ಏಪ್ರಿಲ್- ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಜ್ಜಾಗಿದ್ದರೆ, ಪೂರ್ವಸಿದ್ಧತೆಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ಕೂಡ ನೀಡಿದೆ. ರಾಜ್ಯ ಚುನಾವಣಾ ಆಯೋಗವು ಅವಧಿ ಪೂರ್ವ ಗ್ರಾಪಂಗಳಿಗೆ ನಿಗದಿತ ಕಾಲಮಿತಿಯಲ್ಲಿ ಮೀಸಲು ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ.

ರಾಜ್ಯದ 5,948 ಗ್ರಾಪಂಗಳಲ್ಲಿ 5,698 ಗ್ರಾಪಂಗಳಿಗೆ 2020 ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುತ್ತಿದೆ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ 2021- 22ರಲ್ಲಿ ನಡೆದ 2026ರ ಫೆಬ್ರವರಿ ಎರಡನೇ ವಾರಕ್ಕೆ ಈ ಪಂಚಾಯಿತಿ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿದೆ. ಇದರೊಟ್ಟಿಗೆ 2026ರ ಮಾರ್ಚ್‌ಗೆ ಮುಗಿಯುವ 92 ಗ್ರಾಪಂಗಳನ್ನು ಸೇರಿಸಿ ಚುನಾವಣೆ ನಡೆಸಲು ಸರ್ಕಾರ ತಯಾರಿ ನಡೆಸಿದೆ. ರಾಜ್ಯದ 187 ನಗರ ಸ್ಥಳೀಯ ಸಂಸ್ಥೆಗಳ ಕೌನ್ಸಿಲ್ ಅವಧಿ ಮುಗಿದಿದೆ. 2021ರಿಂದಲೇ ರಾಜ್ಯದ 31 ಜಿಲ್ಲಾ ಪಂಚಾಯಿತಿ ಹಾಗೂ 240 ತಾಲೂಕುಗಳ ಪಾಯಿತಿ ಎಲೆಗಳಿಗೆ ನಡೆದ ಚುನಾಯಿತ ಪ್ರತಿನಿಧಿಗಳಿಲ್ಲ. ಹೀಗಾಗಿ ಏಪ್ರಿಲ್, ಮೇನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಾಧ್ಯತೆಗಳಿವೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *