ಕರ್ನಾಟಕದಾದ್ಯಂತ ಎಲ್ಲೆಲ್ಲೂ ಶಿವರಾತ್ರಿ ಜಾಗರಣೆ, ಪರವಶರಾದ ಭಕ್ತರು

ಕರ್ನಾಟಕದಾದ್ಯಂತ ಎಲ್ಲೆಲ್ಲೂ ಶಿವರಾತ್ರಿ ಜಾಗರಣೆ, ಪರವಶರಾದ ಭಕ್ತರು


ಬೆಂಗಳೂರು, ಫೆಬ್ರವರಿ 16: ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ಮಹಾಶಿವರಾತ್ರಿಯ ಸಡಗರ ಮತ್ತು ಸಂಭ್ರಮ ಮನೆ ಮಾಡಿತ್ತು. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಮಂಗಳೂರಿನಲ್ಲಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಪುಷ್ಪಾಲಂಕಾರಗಳು ಕಂಡುಬಂದವು. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು.

ತಮಿಳುನಾಡಿನ ವೆಲ್ಲಿಯಂಗಿರಿ ಪರ್ವತಗಳ ತಪ್ಪಲಿನಲ್ಲಿರುವ ಇಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಜಾಗವನ್ನು ಪ್ರತಿ ವರ್ಷದಂತೆ ಅದ್ದೂರಿಯಾಗಿ ಆಚರಿಸಲಾಯಿತು. ಸದ್ ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಭಕ್ತರು ಈ ಆಚರಣೆಯಲ್ಲಿ ಭಾಗವಹಿಸಿದ್ದರು, ಶಿವನ ಭಜನೆ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿದರು.

ಬೆಂಗಳೂರಿನ ಕನಕಪುರದಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಶ್ರೀ ಶ್ರೀಶಂಕರ್ ಗುರೂಜಿಯವರ ಸಾನಿಧ್ಯದಲ್ಲಿ ಭಕ್ತರಿಗೆ ಮೂಲ ಸೋಮನಾಥ ಜ್ಯೋತಿರ್ಲಿಂಗದ ಐತಿಹಾಸಿಕ ಅವಶೇಷಗಳ ದರ್ಶನ ಲಭ್ಯವಾಯಿತು. ಪವಿತ್ರ ರುದ್ರಪೂಜೆ ಹಾಗೂ ಶಿವನ ಮಂಗಳಕರ ರೂಪವಾದ ರುದ್ರನ ಆರಾಧನೆಯು ಈ ಸಂದರ್ಭದಲ್ಲಿ ನೆರವೇರಿತು. ಎಲ್ಲ ಹರ ಹರ ಮಹಾದೇವ ಘೋಷಣೆಗಳು ಮೊಳಗಿದವು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *