ಮೈಸೂರು, (ಜನವರಿ 13): ಕರ್ನಾಟಕ ಕಾಂಗ್ರೆಸ್ ನಲ್ಲಿ (ಕರ್ನಾಟಕ ಕಾಂಗ್ರೆಸ್) ಕುರ್ಚಿ ಕಿತ್ತಾಟ ಮುಂದುವರೆದಿದೆ ಸಿಎಂ. ಸಂಕ್ರಾಂತಿ ಬಳಿಕ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ (ಡಿಕೆ ಶಿವಕುಮಾರ್) ಪ್ಲ್ಯಾನ್ ಮಾಡಿದ್ದಾರೆ. ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರ ಮನವೊಲಿಸಿ ಸಿಎಂ ಹುದ್ದೆ ಪಡೆಯಬೇಕೆಂಬ ತಂತ್ರ ರೂಪಿಸಿದ್ದಾರೆ. ಆದರೆ, ಈ ಎಲ್ಲಾ ಬೆಳೆವಣಿಗೆಗಳ ನಡುವೆ ಮೈಸೂರಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹೌದು.. ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು. ಆದರೆ, ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ರಾಹುಲ್ ಗಾಂಧಿ ಡಿಕೆಶಿಯನ್ನು ಬಿಟ್ಟು ಸಿದ್ದರಾಮಯ್ಯನವರನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.