
ಮೈಸೂರು, ಮಾರ್ಚ್ 7: ಬಜೆಟ್ ಮಂಡನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನೆಲೆಗೆ ಬರಲಿದೆಯಾ? ಸಿದ್ದರಾಮಯ್ಯ ನೀಡಿರುವ ಶಾಕಿಂಗ್ ಹೇಳಿಕೆ ಹೀಗೊಂದು ಪ್ರಶ್ನೆ ಹುಟ್ಟಲು ಕಾರಣವಾಗಿದೆ ಸಿಎಂ. ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಅನ್ನು ಮಾರ್ಚ್ 7 ರಂದು ಮಂಡಿಸಿದ್ದಾರೆ. ಬಳಿಕ ಮಾರ್ಚ್ 7 ರಂದು ಮೈಸೂರಿಗೆ ಭೇಟಿ ನೀಡಿದ್ದು, ಇದೇ ವೇಳೆ ಪತ್ರಕರ್ತರು ಅವರ ಬಳಿ, ‘ಇನ್ನೆರಡು ಬಜೆಟ್ ಅನ್ನು ನೀವೇ ಮಂಡಿಸಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ, ಅದು ಹೈಕಮಾಂಡ್‌ನ ಅನುಮತಿಯ ಮೇಲೆ ಜಾರಿಯಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಏನು ತೀರ್ಮಾನ ಮಾಡಿದರೂ ಅದಕ್ಕೆ ತಾನು ಬದ್ಧನಾಗಿದ್ದೇನೆ ಎಂದು ಸಿದ್ರಾಮಯ್ಯ ಹೇಳಿದ್ದಾರೆ. ಹೈಕಮಾಂಡ್ ಬಿಟ್ಟುಬಿಡು ಎಂದರೆ ಬಿಡುತ್ತೀನಿ ಎಂದೂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ಮಾತುಗಳನ್ನಾಡಿದರಾ ಎಂಬ ಪ್ರಶ್ನೆ ಮೂಡಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ